ಉಡುಪಿ: ಕಾಂತಾರ 2 ಸೆಟ್‌ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ನೀರಿನಲ್ಲಿ ಮುಳುಗಿ ಸಾವಿಗೀಡಾದ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಘಟನೆ ನಡೆದಿದೆ.
ಕೊಲ್ಲೂರು ಸೌಪರ್ಣಿಕ ನದಿಯಲ್ಲಿ ಮುಳುಗಿ ಕಪಿಲ್ ಸಾವಿಗೀಡಾಗಿದ್ದಾರೆ. ಚಿತ್ರೀಕರಣ ಮುಗಿಸಿ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ.