‘ಕಾಂತಾರ’ (Kantara) ಖ್ಯಾತಿಯ ರಿಷಬ್ ಶೆಟ್ಟಿ (Rishab Shetty) ಮಂಗಳೂರಿನಲ್ಲಿ ನಡೆದ ಪಂಜುರ್ಲಿ ಕೋಲದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ, ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ ಗಳಿದ್ದಾರೆ, 5 ತಿಂಗಳು ಗಡುವಲ್ಲಿ ನಿನಗೆ ಒಳ್ಳೆಯದು ಮಾಡುತ್ತೇನೆ ಎಂದು ಪಂಜುರ್ಲಿ ದೈವ ಅಭಯ ನೀಡಿದೆ. ಇದನ್ನೂ ಓದಿ:ಒಮನ್ನಲ್ಲಿ ವಿಜಯ್, ರಶ್ಮಿಕಾ ಸುತ್ತಾಟ- ಬೀಚ್ ಫೋಟೋದಿಂದ ಸಿಕ್ಕಿಬಿದ್ದ ಜೋಡಿ
ಪಂಜುರ್ಲಿ ಕೋಲದಲ್ಲಿ ರಾತ್ರಿಯಿಂದ ಬೆಳಗಿನವರೆಗೂ ಪತ್ನಿ ಮತ್ತು ಮಕ್ಕಳೊಂದಿಗೆ ರಿಷಬ್ ಶೆಟ್ಟಿ ಭಾಗಿಯಾಗಿದ್ದಾರೆ. ಉತ್ಸವದ ಕೊನೆಯಲ್ಲಿ ವಾರಾಹಿ ಪಂಜುರ್ಲಿ ಬಳಿ ರಿಷಬ್ ಕಷ್ಟ ಹೇಳಿಕೊಂಡಿದ್ದಾರೆ. ಆಗ ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ಗಳಿದ್ದಾರೆ. ನಿನ್ನ ಸಿನಿ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, 5 ತಿಂಗಳ ಒಳಗೆ ನಿನಗೆ ಒಳ್ಳೆಯದು ಮಾಡುತ್ತೇನೆ ಎಂದು ಪಂಜುರ್ಲಿ ದೈವ ಅಭಯ ನೀಡಿದೆ. ಇದನ್ನೂ ಓದಿ:ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಗಿಣಿ ದ್ವಿವೇದಿ
ಅಂದಹಾಗೆ, ‘ಕಾಂತಾರ ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಗಲಿದೆ. ಈ ಸಿನಿಮಾದ ಕೆಲಸ ಭರದಿಂದ ನಡೆಯುತ್ತಿದೆ.