‘ಕಾಂತಾರ’ ಬ್ಯೂಟಿ ಸಪ್ತಮಿ ಗೌಡ (Sapthami Gowda) ಸದ್ಯ ಹೊಸ ಫೋಟೋಶೂಟ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಶಾರ್ಟ್ ಡ್ರೆಸ್ ಧರಿಸಿ ನಟಿ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿಯ ಬೋಲ್ಡ್ ಅವತಾರ ನೆಟ್ಟಿಗರ ಗಮನ ಸೆಳೆಯುತ್ತಿದೆ. ಇದನ್ನೂ ಓದಿ:ಅಹಂಕಾರ ಪಂಕ್ಚರ್ ಮಾಡಿ ಸ್ಥಾನ ತೋರಿಸಿದ್ದಕ್ಕೆ ಧನ್ಯವಾದಗಳು ಎಂದ ಪ್ರಕಾಶ್ ರಾಜ್
ವೈಟ್ ಸ್ಲಿವ್‌ಲೆಸ್ ಟಾಪ್, ನೀಲಿ ಬಣ್ಣದ ಸ್ಕರ್ಟ್ ಧರಿಸಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ನಟಿಯ ಸ್ಟೈಲೀಶ್ ಲುಕ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಸಪ್ತಮಿ ಲುಕ್‌ಗೆ ಅಯ್ಯೋ ನಮ್ಮ ಹೊಟ್ಟೆ ಯಾಕೆ ಉರಿಸುತ್ತೀರಾ, ಮುದ್ದಾಗಿ ಕಾಣಿಸುತ್ತಿದ್ದೀರಾ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.
View this post on Instagram
ಈ ಹಿಂದೆ ಸಪ್ತಮಿ ಗೌಡ ‘ದಿ ವ್ಯಾಕ್ಸಿನ್ ವಾರ್’ ಮೂಲಕ ಬಾಲಿವುಡ್‌ಗೆ (Bollywood) ಎಂಟ್ರಿ ಕೊಟ್ಟಿದ್ದರು. ಇದೀಗ ನಿತಿನ್‌ಗೆ ನಾಯಕಿಯಾಗಿ ‘ತಮ್ಮುಡು’ ಚಿತ್ರದ ಮೂಲಕ ತೆಲುಗು (Tollywood) ಸಿನಿಮಾ ರಂಗಕ್ಕೂ ಪ್ರವೇಶ ಮಾಡಿದಂತಾಗಿದೆ. ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಬಹುಭಾಷಾ ತಾರೆಯಾಗಿದ್ದಾರೆ. ಜೊತೆಗೆ ಕನ್ನಡದಲ್ಲೇ ಅವರು ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.
‘ಪಾಪ್ ಕಾರ್ನ್ ಮಂಕಿ ಟೈಗರ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ರು. ಡಾಲಿಗೆ ನಾಯಕಿಯಾಗಿ ಮೊದಲ ಸಿನಿಮಾದಲ್ಲೇ ಸೈ ಎನಿಸಿಕೊಂಡರು. ಬಳಿಕ ‘ಕಾಂತಾರ’ (Kantara) ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ಜೋಡಿಯಾದರು. ಈಗ ಬಂಪರ್ ಅವಕಾಶಗಳು ನಟಿಗೆ ಅರಸಿ ಬರುತ್ತಿವೆ.