ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಮತ್ತೊಂದು ಹೊಸ ದಾಖಲೆಯನ್ನು ಕ್ರಿಯೇಟ್ ಮಾಡಿದೆ. ಅದು ಕೆಜಿಎಫ್ 2 ದಾಖಲೆಯನ್ನೂ ಉಡಿಸ್ ಮಾಡಿದೆ. ಈವರೆಗೂ ಹೊಂಬಾಳೆ ಫಿಲಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮಾಹಿತಿಯನ್ನು ಸ್ವತಃ ನಿರ್ಮಾಪಕ ವಿಜಯ್ ಕಿರಗಂದೂರ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Advertisement
ಈವರೆಗೆ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆ. ಇನ್ನಷ್ಟು ಹೊಸ ದಾಖಲೆ ನಿರ್ಮಿಸುವ ಹಾದಿಯಲ್ಲಿ ‘ಕಾಂತಾರ’. ನಿಮ್ಮ ಪ್ರೋತ್ಸಾಹಕ್ಕೆ ನಾವು ಸದಾ ಋಣಿ. ಧನ್ಯವಾದಗಳು ಕರ್ನಾಟಕ ಎಂದು ನಿರ್ಮಾಪಕ ವಿಜಯ್ ಕಿರಂಗದೂರ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಜ್ಯೂ.ಎನ್‌ಟಿಆರ್ ಭೇಟಿ ಮಾಡಿ ಕಣ್ಣೀರಿಟ್ಟ ಜಪಾನ್ ಫ್ಯಾನ್ಸ್
Advertisement
Advertisement
ಕಾಂತಾರ ಸಿನಿಮಾದ ಒಟ್ಟು ಗಳಿಕೆ 200 ಕೋಟಿ ಎಂದು ಅಂದಾಜಿಸಲಾಗಿದೆ. ಕನ್ನಡದಲ್ಲೇ ಅದು ನೂರು ಕೋಟಿ ಗಳಿಕೆ ಮಾಡಿದೆ. ಬಾಲಿವುಡ್ ನಲ್ಲೂ ಕಾಂತಾರ ಹಿಂದೆ ಬಿದ್ದಿಲ್ಲ. ಹಿಂದಿಯಲ್ಲಿ ಈವರೆಗೂ 22.25 ಕೋಟಿ ಹಣ ಹರಿದು ಬಂದಿದೆಯಂತೆ. ಕೆಜಿಎಫ್ 2 ಸಿನಿಮಾದ ನಂತರ ಕನ್ನಡ ಸಿನಿಮಾವೊಂದು ಈ ಪರಿ ಗಳಿಕೆ ಮಾಡಿದ ಹೆಗ್ಗಳಿಕೆ ಕಾಂತಾರದ್ದು.
Advertisement
ಒಂದು ಕಡೆ ಬಾಕ್ಸ್ ಆಫೀಸಿನಲ್ಲಿ ಸಿನಿಮಾ ಸದ್ದು ಮಾಡುತ್ತಿದ್ದರೆ, ಮತ್ತೊಂದು ಕಡೆ ಹಿಂದೂ ಸಂಸ್ಕೃತಿಗೆ ಸಂಬಂಧಿಸಿದಂತೆ ಈ ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ಚೇತನ್ ಮತ್ತು ಬೆಂಬಲಿಗರು ಸಿನಿಮಾದ ಬಗ್ಗೆ ಅಪಸ್ವರ ಎತ್ತಿದ್ದಾರೆ. ಹಿಂದೂಪರ ಸಂಘಟನೆಯ ಕಾರ್ಯಕರ್ತರು ಚೇತನ್ ವಿರುದ್ಧ ದಂಗೆ ಎದ್ದಿದ್ದಾರೆ. ಕೆಲವು ಕಡೆ ಚೇತನ್ ಮೇಲೆ ದೂರು ಕೂಡ ದಾಖಲಾಗಿವೆ.