– ಭಾರತದಾದ್ಯಂತ 7,000 ಕ್ಕೂ ಅಧಿಕ ಸ್ಕ್ರೀನ್, ಕರ್ನಾಟಕದಲ್ಲಿ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ
– ವಿಜಯದಶಮಿ ದಿನವಾದ ಇಂದು ಬೆಳಗ್ಗೆ 6:30ಕ್ಕೆ ಮೊದಲ ಶೋ ಆರಂಭ
ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 (Kantara Chapter 1) ಸಿನಿಮಾ ವಿಜಯದಶಮಿ ದಿನವಾದ ಇಂದು (ಅ.2) ವಿಶ್ವದಾದ್ಯಂತ ಗ್ರ್ಯಾಂಡ್ ರಿಲೀಸ್ ಆಗಿದೆ.
ನಗರದ ಹಲವು ಚಿತ್ರಮಂದಿರಗಳಲ್ಲಿ ಬೆಳಗ್ಗೆ 6:30ಕ್ಕೆ ಮೊದಲ ಶೋ ಆರಂಭವಾಗಿದೆ. ವೀರೇಶ್, ಸಂತೋಷ್ ಚಿತ್ರಮಂದಿರ ಹಾಗೂ ಹಲವು ಮಲ್ಟಿಪ್ಲೆಕ್ಸ್‌ಗಳಲ್ಲಿ 6:30ಕ್ಕೆ ಮೊದಲ ಶೋ ಶುರುವಾಗಿದೆ. ಇದನ್ನೂ ಓದಿ: ಕಾಂತಾರದ ನಂತರದ What Next? – ಪ್ರಶ್ನೆಗೆ ಉತ್ತರ ನೀಡಿದ ರಿಷಭ್ ಶೆಟ್ಟಿ
ಕರ್ನಾಟಕದಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕಾಂತಾರ 1 ಸಿನಿಮಾ ಬಿಡುಗಡೆಯಾಗಿದೆ. ಮೊದಲ ದಿನ ಎರಡು ಸಾವಿರಕ್ಕೂ ಹೆಚ್ಚು ಪ್ರದರ್ಶನ ಕಾಣಲಿದೆ.
7,000ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಕನ್ನಡ ಸೇರಿದಂತೆ ಸಪ್ತ ಭಾಷೆಗಳಲ್ಲಿ ಭಾರತ ಹಾಗೂ ಭಾರತದಾಚೆಗೂ ಸಿನಿಮಾ ಬಿಡುಗಡೆಯಾಗಲಿದೆ. ರಿಷಬ್ ಶೆಟ್ಟಿ (Rishab Shetty), ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ತಮಿಳು ನಟ ಜಯರಾಂ ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ಇದನ್ನೂ ಓದಿ: ಟಾಲಿವುಡ್‌ನಲ್ಲಿ ಕಾಂತಾರ ಬಾಯ್ಕಾಟ್ ಸಮಸ್ಯೆ ಬಗೆಹರಿಸಿದ ಪವನ್ ಕಲ್ಯಾಣ್
ಕಾಂತಾರ 1 ಪ್ರೀಮಿಯರ್ ಶೋಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ನಟ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾ ಸ್ಟೋರಿ ಮತ್ತು ಮೇಕಿಂಗ್‌ನಲ್ಲಿ ರಿಷಬ್ ಶೆಟ್ಟಿ ಯಶಸ್ವಿಯಾಗಿದ್ದಾರೆಂಬ ಮಾತುಗಳು ಪ್ರೀಮಿಯರ್ ಶೋ ವೇಳೆ ಕೇಳಿಬಂದಿವೆ.