ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ಭಾರತಾದ್ಯಂತ ಭರ್ಜರಿ ಪ್ರದರ್ಶನ ನಡೆಯುತ್ತಿದೆ. ಬಾಕ್ಸ್ ಆಫೀಸ್ ಕೂಡ ಭರ್ತಿಯಾಗಿದೆ. ಈಗಾಗಲೇ ಅಂದಾಜು 300 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಸಿನಿಮಾ ಕೇವಲ ನಿರ್ದೇಶಕರಿಗೆ ಮತ್ತು ನಿರ್ಮಾಪಕರಿಗೆ ಮಾತ್ರವಲ್ಲ, ದೈವನರ್ತಕರ ಬಾಳಲ್ಲೂ ನಗೆ ಮೂಡಿಸಿದೆ. ಈ ಸಿನಿಮಾದ ನೋಡಿದ ನಂತರ ದೈವ ನರ್ತಕರಿಗೆ ಹಲವು ಸೌಲಭ್ಯಗಳು ಒಲಿದು ಬಂದಿವೆ.
Advertisement
ಇತ್ತೀಚೆಗಷ್ಟೇ ಕರ್ನಾಟಕ ಸರಕಾರವು ದೈವನರ್ತಕರಿಗೆ ಮಾಸಾಶನವನ್ನು ಘೋಷಣೆ ಮಾಡಿದ್ದರು. ಸರಕಾರದ ಈ ನಡೆ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು, ಇದೀಗ ಮೊದಲ ಬಾರಿಗೆ ದೈವನರ್ತಕರಿಗೂ ರಾಜ್ಯೋತ್ಸವ ಪ್ರಶಸ್ತಿಯನ್ನು (Rajyotsava Award) ಘೋಷಣೆ ಮಾಡಿದ್ದಾರೆ. ಈ ಬಾರಿ ದೈವನರ್ತಕ ಗುಡ್ಡಪಾಣಾರಗೆ (Guddapana) ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಉಡುಪಿ ಜಿಲ್ಲೆಯ ಕಾಪುವಿನ ಗುಡ್ಡ ಪಾಣಾರು ಇಂಥದ್ದೊಂದು ಗೌರವಕ್ಕೆ ಪಾತ್ರರಾಗಿದ್ದಾರೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ
Advertisement
Advertisement
ಉಡುಪಿ (Udupi) ಜಿಲ್ಲೆಯ ಕಾಪು ಹಳೆ ಮಾರಿಗುಡಿಯಲ್ಲಿ ಎರಡು ವರ್ಷಕೊಮ್ಮೆ ನಡೆಯುವ ಪಿಲಿಕೋಲದಲ್ಲಿ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಿರುವ ಗುಡ್ಡ ಪಾಣರಿಗೆ ಜಾನಪದ ವಿಭಾಗದಲ್ಲಿ ಈ ಬಾರಿ ಪ್ರಶಸ್ತಿ ಘೋಷಣೆ ಆಗಿದ್ದು, ಇಂದು ಬೆಂಗಳೂರಿನಲ್ಲಿ ಅವರು ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ. 68ರ ವಯಸ್ಸಿನ ಗುಡ್ಡ ಪಾಣಾರು 25ನೇ ವಯಸ್ಸಿನಿಂದಲೇ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ.
Advertisement
ಅಷ್ಟೇ ಅಲ್ಲದೇ, ಕಾಂತಾರ ಸಿನಿಮಾದಲ್ಲಿ ನಟಿಸಿದ್ದ ದೈವಾರಾಧಕ ನಾಗರಾಜ ಪಾಣ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಆಗಿದೆ. ಯಾವುದೇ ಅರ್ಜಿ ಹಾಕದೇ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ ಎನ್ನುವುದು ಮತ್ತೊಂದು ವಿಶೇಷ. ಕಾಂತಾರ ಸಿನಿಮಾದಿಂದಾಗಿ ದೈವ ನರ್ತಕರು ಕೂಡ ಇದೀಗ ಮುನ್ನೆಲೆಗೆ ಬಂದಿದ್ದಾರೆ.