ಚಿತ್ರಮಂದಿರದಲ್ಲಿ ʻಕಾಂತಾರʼ(Kantara Film) ಸಿನಿಮಾ 50 ದಿನ ಪೂರೈಸಿ ಮುನ್ನುಗ್ಗುತ್ತಿದೆ. ಇದರ ಮಧ್ಯೆ ಒಟಿಟಿ(Ott) ಇಷ್ಟಪಡುವ ಅಭಿಮಾನಿಗಳಿಗೆ ʻಕಾಂತಾರʼ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದೆ. ಒಟಿಟಿಯಲ್ಲಿ ಕಾಂತಾರ ಮೂಡಿ ಬರಲು ಈಗಾಗಲೇ ಕೌಂಟ್‌ಡೌನ್ ಶುರುವಾಗಿದೆ.
ಹೊಂಬಾಳೆ ಸಂಸ್ಥೆ (Hombale Films) ನಿರ್ಮಾಣದ ರಿಷಬ್ (Rishab Shetty) ನಟಿಸಿ, ನಿರ್ದೇಶಿಸಿರುವ ಸಿನಿಮಾ ಕಾಂತಾರ ವಿಶ್ವದ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಚಿತ್ರಮಂದಿರದಲ್ಲಿ ಲೂಟಿ ಮಾಡುತ್ತಿರುವ ಈ ಸಿನಿಮಾ ಈಗ ಒಟಿಟಿಯತ್ತ ಲಗ್ಗೆ ಇಡುತ್ತಿದೆ. ಅಮೆಜಾನ್ ಪ್ರೈಮ್‌ನಲ್ಲಿ ನವೆಂಬರ್ 24ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ಬರಲಿದೆ. ಈ ಮೂಲಕ ಒಟಿಟಿ ಪ್ರಿಯರಿಗೆ ಕಾಂತಾರ ತಂಡ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದನ್ನೂಬ ಓದಿ:51ನೇ ವಯಸ್ಸಿನಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿರುವ ಮನೋಜ್ ತಿವಾರಿ
ಐವತ್ತು ದಿನಗಳನ್ನು ಪೂರೈಸಿ, ಯಶಸ್ಸಿಯಾಗಿ ಮುನ್ನುಗ್ಗುತ್ತಿರುವ ಕಾಂತಾರ ಸಿನಿಮಾ ಈವರೆಗೂ 400 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಕರ್ನಾಟಕವೊಂದರಲ್ಲೇ 170 ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ ಎಂದು ಹೇಳಲಾಗುತ್ತಿದೆ.
ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ವಿದೇಶದಿಂದ ಬಂದ ಹಣವನ್ನು ಒಟ್ಟಾಗಿಸಿದರೆ ಸಿನಿಮಾದ ಒಟ್ಟು ಗಳಿಕೆ 400 ಕೋಟಿ ಎಂದು ಅಂದಾಜಿಸಲಾಗಿದೆ. ಹಾಗಾಗಿ ಕಡಿಮೆ ಬಜೆಟ್ ನಲ್ಲಿ ತಯಾರಾದ ಸಿನಿಮಾ ಈ ಪ್ರಮಾಣದಲ್ಲಿ ಗಳಿಕೆ ಮಾಡಿದ್ದು ಒಂದು ರೀತಿಯಲ್ಲಿ ದಾಖಲೆ ಎಂದೇ ಬಣ್ಣಿಸಲಾಗುತ್ತಿದೆ.