ಐವತ್ತು ದಿನಗಳನ್ನು ಪೂರೈಸಿ, ಯಶಸ್ಸಿಯಾಗಿ ಮುನ್ನುಗ್ಗುತ್ತಿರುವ ‘ಕಾಂತಾರ’ ಸಿನಿಮಾ ಈವರೆಗೂ 400 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕವೊಂದರಲ್ಲೇ 170 ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ ಎಂದು ಹೇಳಲಾಗುತ್ತಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ವಿದೇಶದಿಂದ ಬಂದ ಹಣವನ್ನು ಒಟ್ಟಾಗಿಸಿದರೆ ಸಿನಿಮಾದ ಒಟ್ಟು ಗಳಿಕೆ 400 ಕೋಟಿ ಎಂದು ಅಂದಾಜಿಸಲಾಗಿದೆ. ಹಾಗಾಗಿ ಕಡಿಮೆ ಬಜೆಟ್ ನಲ್ಲಿ ತಯಾರಾದ ಸಿನಿಮಾ ಈ ಪ್ರಮಾಣದಲ್ಲಿ ಗಳಿಕೆ ಮಾಡಿದ್ದು ಒಂದು ರೀತಿಯಲ್ಲಿ ದಾಖಲೆ ಎಂದೇ ಬಣ್ಣಿಸಲಾಗುತ್ತಿದೆ.
Advertisement
ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದು ಹೊಂಬಾಳೆ ಫಿಲಂಸ್. ಈಗ ಅದೇ ಸಂಸ್ಥೆಯಿಂದ ನಿರ್ಮಾಣವಾಗಿರುವ ‘ಕಾಂತಾರ’ ಚಿತ್ರವನ್ನು ಮನೆ ಮಂದಿಯೆಲ್ಲಾ ನೋಡಿ ಇಷ್ಟಪಟ್ಟಿದ್ದಾರೆ. ಹಿರಿಯರಿಂದ ಕಿರಿಯರವರೆಗೂ ಎಲ್ಲರೂ ಮೆಚ್ಚಿಕೊಂಡಿರುವ ಈ ಚಿತ್ರ ಎಲ್ಲರಿಗೂ ಇಷ್ಟವಾಗುವುದಕ್ಕೆ ಕಾರಣ ಚಿತ್ರದ ಕಥೆ ಮತ್ತು ಮೇಕಿಂಗ್. ಹೊಂಬಾಳೆ ಫಿಲಂಸ್ ಮೊದಲಿನಿಂದಲೂ ಕಥೆಗೆ ವಿಶೇಷವಾದ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಈಗಾಗಲೇ ‘ರಾಜ್ಕುಮಾರ’, ‘ಯುವರತ್ನ’, ‘ಕೆಜಿಎಫ್’ ಮುಂತಾದ ಚಿತ್ರಗಳು ಈ ವಿಷಯವನ್ನು ನಿರೂಪಿಸಿದೆ. ಈಗ ‘ಕಾಂತಾರ’ ಸಹ ಇದೇ ನಿಟ್ಟಿನಲ್ಲಿ ಸಾಗಿರುವುದಷ್ಟೇ ಅಲ್ಲ, ‘ಕೆಜಿಎಫ್’ ಸರಣಿಯ ನಂತರ ಒಂದೇ ಸಂಸ್ಥೆಯ ಇನ್ನೊಂದು ಚಿತ್ರ ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿರುವುದು ವಿಶೇಷ.
Advertisement
Advertisement
ಬರೀ ಕನ್ನಡವಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಒಟ್ಟು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಯು ಹಲವು ಚಿತ್ರಗಳನ್ನು ನಿರ್ಮಿಸುತ್ತಿದೆ. ಒಂದೇ ಸಂಸ್ಥೆಯಿಂದ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ. ಇದನ್ನೂ ಓದಿ:ಬಳ್ಳಾರಿಗೆ ಬರಲಿದ್ದಾರೆ ವಿಜಯ್ ಮತ್ತು ರಶ್ಮಿಕಾ ಮಂದಣ್ಣ
Advertisement
ಈಗಾಗಲೇ ಕನ್ನಡದಲ್ಲಿ ಜಗ್ಗೇಶ್ ಅಭಿನಯದಲ್ಲಿ ಸಂತೋಷ್ ಆನಂದರಾಮ್ ನಿರ್ದೇಶಿಸುತ್ತಿರುವ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಶ್ರೀಮುರಳಿ ಅಭಿನಯದಲ್ಲಿ ಡಾ. ಸೂರಿ ನಿರ್ದೇಶಿಸುತ್ತಿರುವ ‘ಬಘೀರ’ ಚಿತ್ರವು ಚಿತ್ರೀಕರಣ ಹಂತದಲ್ಲಿದೆ. ರಕ್ಷಿತ್ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆಂಟೋನಿ’ ಮತ್ತು ಯುವ ರಾಜ್ಕುಮಾರ್ಗಾಗಿ ಸಂತೋಷ್ ಆನಂದರಾಮ್ ನಿರ್ದೇಶಿಸಲಿರುವ ಹೊಸ ಚಿತ್ರಗಳು ಸದ್ಯದಲ್ಲೇ ಶುರುವಾಗಲಿವೆ.
ಬೇರೆ ಭಾಷೆಯ ಚಿತ್ರಗಳ ವಿಷಯಕ್ಕೆ ಬಂದರೆ, ತೆಲುಗಿನಲ್ಲಿ ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, 2023ರ ಸೆಪ್ಟೆಂಬರ್ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ತಮಿಳಿನಲ್ಲಿ ಎರಡು ಚಿತ್ರಗಳನ್ನು ಹೊಂಬಾಳೆ ನಿರ್ಮಿಸುತ್ತಿದ್ದು, ಈ ಪೈಕಿ ಒಂದು ಚಿತ್ರವನ್ನು ‘ಸೂರರೈ ಪೊಟ್ರು’ ಖ್ಯಾತಿಯ ಸುಧಾ ಕೊಂಗರಾ ನಿರ್ದೇಶನ ಮಾಡಿದರೆ, ಇನ್ನೊಂದರ ಘೋಷಣೆ ಶೀಘ್ರದಲ್ಲೇ ಆಗಲಿದೆ. ಮಲಯಾಳಂನಲ್ಲೂ ಹೊಂಬಾಳೆ ಫಿಲಂಸ್ ವತಿಯಿಂದ ಎರಡು ಚಿತ್ರ ನಿರ್ಮಾಣವಾಗುತ್ತಿವೆ. ಫಹಾದ್ ಫಾಸಿಲ್ ಅಭಿನಯದ ‘ಧೂಮಂ’ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದರೆ, ಪೃಥ್ವಿರಾಜ್ ಸುಕುಮಾರನ್ ನಟಿಸಿ-ನಿರ್ದೇಶಿಸಲಿರುವ ‘ಟೈಸನ್’ ಚಿತ್ರವು ಮುಂದಿನ ವರ್ಷ ಪ್ರಾರಂಭವಾಗಲಿದೆ. ಹಿಂದಿ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯಲಿದ್ದು ಸದ್ಯದಲ್ಲೇ ಅಧಿಕೃತ ಘೋಷಣೆಯಾಗಲಿದೆ.