ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ ಹಿಂದಿ ಅವತರಣಿಕೆ ಸಿನಿಮಾ ನೂರು ದಿನಗಳನ್ನ ಪೂರೈಸಿದೆ. ಬಾಲಿವುಡ್ ಸಿನಿಪ್ರೇಕ್ಷಕರ ಮನಗೆಲ್ಲುವಲ್ಲಿ `ಕಾಂತಾರ’ ಸಿನಿಮಾ ಯಶಸ್ವಿಯಾಗಿದೆ. ಈ ಬಗ್ಗೆ ರಿಷಬ್ ಮತ್ತು ʻಹೊಂಬಾಳೆʼ ಸಂಸ್ಥೆ ಸಂತಸ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅದ್ದೂರಿಯಾಗಿ ನಡೆಯಿತು `ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಪ್ರಿಯಾಂಕಾ ಕಾಮತ್ ಎಂಗೇಜ್‌ಮೆಂಟ್
2022, ಸೆ.30 ರಿಲೀಸ್ ಆದ ಕಾಂತಾರ ಸಿನಿಮಾಗೆ ದೇಶದ ಎಲ್ಲಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಬಾಲಿವುಡ್ ಬಾಕ್ಸಾಫೀಸ್‌ನಲ್ಲೂ `ಕಾಂತಾರ’ ಚಿತ್ರ ಗೆದ್ದು ಬೀಗಿದೆ. ಹಿಂದಿ ವರ್ಷನ್‌ನ ʻಕಾಂತಾರʼ ಸಿನಿಮಾ ಫ್ಯಾನ್ಸ್‌ಗೆ ಇಷ್ಟವಾಗಿದೆ. ಅಲ್ಲೂ ಕೂಡ ರಿಷಬ್ ಶೆಟ್ಟಿ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದೆ.
ಈಗ ಚಿತ್ರದ ಸಕ್ಸಸ್ ಕುರಿತು ರಿಷಬ್ ಶೆಟ್ಟಿ, ಹೊಂಬಾಳೆ ಸಂಸ್ಥೆ ಟ್ವೀಟ್ ಮಾಡಿದ್ದಾರೆ. ಹಿಂದಿಯಲ್ಲಿ `ಕಾಂತಾರ’ 100 ದಿನಗಳನ್ನ ಪೂರೈಸಿದೆ ಎಂದು ಹೇಳಲು ನಾವು ಸಂಭ್ರಮಿಸುತ್ತೇವೆ. ಹಿಂದಿ ಚಿತ್ರರಂಗದ ಬೆಂಬಲಕ್ಕಾಗಿ ನಾವು ಪ್ರೇಕ್ಷಕರಿಗೆ ಕೃತಜ್ಞತೆಗಳನ್ನು ತಿಳಿಸುತ್ತೇವೆ ಎಂದಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಧನ್ಯವಾದ ತಿಳಿಸಿದ್ದಾರೆ.
We are ecstatic to share that #Kantara in Hindi, depicting the traditional folklore, has completed 100 days. We express our deep gratitude to the audience for their unwavering support. #KantaraHindi100Days @shetty_rishab #VijayKiragandur @hombalefilms @AAFilmsIndia pic.twitter.com/z3KaRqpNyg
— Hombale Films (@hombalefilms) January 22, 2023
ಇನ್ನೂ ʻಹೊಂಬಾಳೆ ಸಂಸ್ಥೆʼ ನಿರ್ಮಾಪಕ ವಿಜಯ್ ಕಿರಗಂದೂರು ಇತ್ತೀಚಿನ ಸಂದರ್ಶನವೊಂದರಲ್ಲಿ `ಕಾಂತಾರ 2′ ಸಿನಿಮಾ ಮಾಡುವ ಕುರಿತಾಗಿ ಮಾತನಾಡಿದ್ದಲ್ಲದೇ, ಸಿನಿಮಾ ಶೂಟಿಂಗ್ ಮತ್ತು ರಿಲೀಸ್ ದಿನಾಂಕವನ್ನೂ ಅವರು ಘೋಷಿಸಿದ್ದಾರೆ. ಜೊತೆಗೆ ಈಗಾಗಲೇ ರಿಷಬ್ ಮತ್ತು ಟೀಮ್ ಕಥೆ ಮಾಡುವುದರಲ್ಲಿ ತೊಡಗಿದೆ ಎನ್ನುವ ವಿಷಯವನ್ನೂ ಬಹಿರಂಗಪಡಿಸಿದ್ದಾರೆ. ಚಿತ್ರೀಕರಣದ ಸ್ಥಳ ಹುಡುಕಲು ಕಾಡು ಮೇಡು ಅಲೆಯುತ್ತಿರುವುದಾಗಿಯೂ ತಿಳಿಸಿದ್ದಾರೆ.
ವಿಜಯ್ ಕಿರಗಂದೂರು ಅವರೇ ಹೇಳಿದಂತೆ ಈ ವರ್ಷ ಜೂನ್‌ನಿಂದ ಚಿತ್ರೀಕರಣ ಶುರುವಾಗಲಿದೆ. ಏಪ್ರಿಲ್ ಅಥವಾ ಮೇ 2024ರಂದು `ಕಾಂತಾರ 2′ ಚಿತ್ರ ತೆರೆಗೆ ಬರಲಿದೆಯಂತೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k