‘ಕಾಂತಾರ’ ಜಾತಿ, ಧರ್ಮ, ಭಾಷೆ ಮೀರಿ ಬೆಸೆಯುತ್ತಿದೆ: ನಟ ಕಿಶೋರ್

Public TV
1 Min Read
FotoJet 97

ಕಾಂತಾರ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಎಷ್ಟು ಸದ್ದು ಮಾಡುತ್ತಿದೆಯೋ, ವಿವಾದ ಕಾರಣದಿಂದಾಗಿಯೂ ಅಷ್ಟೇ ಸದ್ದು ಮಾಡುತ್ತಿದೆ. ದೈವಾರಾಧನೆ ಹಿಂದೂ ಸಂಸ್ಕೃತಿಯಲ್ಲ ಎಂದು ನಟ ಚೇತನ್ ಹೇಳಿಕೆ ನೀಡುತ್ತಿದ್ದಂತೆಯೇ ಹಿಂದೂಪರ ಹೋರಾಟಗಾರರು ನಟನ ಮೇಲೆ ಮುಗಿ ಬಿದ್ದಿದ್ದಾರೆ. ಚೇತನ್ ಮೇಲೆ ದೂರುಗಳನ್ನೂ ನೀಡಿದ್ದಾರೆ. ಧರ್ಮ ಮತ್ತು ಕಾಂತಾರ ದಂಗಲ್ ನಡೆದಿದೆ. ಈ ಕುರಿತು ಅದೇ ಸಿನಿಮಾದಲ್ಲಿ ನಟಿಸಿರುವ ಕಿಶೋರ್ ಪ್ರತಿಕ್ರಿಯಿಸಿದ್ದಾರೆ. ಫೇಸ್ ಬುಕ್ ನಲ್ಲಿ ಈ ಕುರಿತು ಅವರು ಬರೆದುಕೊಂಡಿದ್ದಾರೆ. ಅದನ್ನು ಯಥಾವತ್ತಾಗಿ ಇಲ್ಲಿ ಪ್ರಕಟಿಸಲಾಗಿದೆ.

Kantara 5

ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಸಿ ಕಳಕಳಿಯ ಮನವಿ . ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ  ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ?? ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

kantara 1

ಎಲ್ಲ ಒಳ್ಳೆಯ ಸಿನಿಮಾಗಳಂತೆ “ಕಾಂತಾರ” ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿ ಹೋದೀತು.

kantara 1

ಕೇವಲ ಓಟಿಗಾಗಿ ಪಟೇಲ್ ಗಾಂಧಿ ಬೋಸ್ ನೆಹ್ರೂ ಸಹಿತ ಕೋಟಿ ಕೋಟಿ ಸ್ವತಂತ್ರ್ಯ ಹೋರಾಟಗಾರರನ್ನೂ ಬಳಸುವ, ಬೈಯ್ಯುವ.. ರಾಷ್ಟ್ರ ಗೀತೆ, ಧ್ವಜ,ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನಒಂದು ಕ್ಷಣ ಯೋಚಿಸಿ. ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ.

Live Tv
[brid partner=56869869 player=32851 video=960834 autoplay=true]

Share This Article