ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಕಾಂಬಿನೇಷನ್ ನ ಕಾಂತಾರ ಸಿನಿಮಾ ಇದೀಗ ತುಳುವಿನಲ್ಲಿ ರಿಲೀಸ್ ಆಗುತ್ತಿದೆ. ಮೊನ್ನೆಯಷ್ಟೇ ತುಳು ಭಾಷೆಯ ಟ್ರೇಲರ್ ರಿಲೀಸ್ ಆಗಿದ್ದು ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ತುಳು ನಾಡಿನ ದೈವಾರಾಧನೆಯನ್ನೇ ಪ್ರಮುಖವಾಗಿಟ್ಟುಕೊಂಡು ಮಾಡಿರುವ ಸಿನಿಮಾ ಇದಾಗಿದ್ದರಿಂದ ಅತ್ಯಂತ ಭಕ್ತಿಯಿಂದಲೇ ಈ ಸಿನಿಮಾವನ್ನು ಸ್ವೀಕರಿಸಿದ್ದರು. ಇದೀಗ ಸಿನಿಮಾ ರಿಲೀಸ್ ಕೂಡ ಆಗಿದೆ.
ಈಗಾಗಲೇ ತುಳು ಸಿನಿಮಾ ರಿಲೀಸ್ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. ಇದೇ ಡಿಸೆಂಬರ್ 2 ರಂದು ತುಳು ಭಾಷೆಯಲ್ಲಿ ಕಾಂತಾರ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗುತ್ತಿದ್ದು, ಅದಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಮತ್ತೆ ಕನ್ನಡಕ್ಕೆ ಬರಲಿದ್ದಾರೆ ಶಿಲ್ಪಾ ಶೆಟ್ಟಿ: ʻಕೆಡಿ’ಯಲ್ಲಿ ಲೇಡಿ ಪವರ್
ಶುಕ್ರವಾರ, ಶನಿವಾರ ಮತ್ತು ಭಾನುವಾರ ಹಲವು ಶೋಗಳನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಗಳಲ್ಲಿ ರಿಲೀಸ್ ಮಾಡಿದೆ ಡ್ರೀಮ್ಸ್ ಸ್ಕ್ರೀನ್ ಇಂಟರ್ ನ್ಯಾಷನಲ್ ಸಂಸ್ಥೆ. ಅಧಿಕೃವಾಗಿ ತನ್ನ ಪೇಜ್ ನಲ್ಲಿ ಯಾವೆಲ್ಲ ಶೋಗಳು ಎಷ್ಟು ಗಂಟೆಗೆ ಎಂದು ಬರೆದುಕೊಂಡಿದೆ. ನಿನ್ನೆ ಮತ್ತು ಇವತ್ತು ಒಳ್ಳೆಯ ಪ್ರತಿಕ್ರಿಯೆ ಕೂಡ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.