ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾದ ಹಾಡೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ (Varaha Rupam) ಹಾಡನ್ನು ಸಿನಿಮಾದಲ್ಲಿ ಬಳಸದಂತೆ ತಡೆಯಾಜ್ಞೆ ನೀಡಲಾಗಿದ್ದು, ಇದರಿಂದಾಗಿ ಚಿತ್ರಕ್ಕೆ ಕಾನೂನು ತೊಡಕು ಎದುರಾಗಿದೆ. ಈ ಹಾಡನ್ನು ನಾನು ಯಾವುದರಿಂದಲೂ ಕದ್ದಿಲ್ಲ ಎಂದು ಈಗಾಗಲೇ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು. ಆದರೂ, ಕೇರಳದ ಕೊಯಿಕ್ಕೋಡು ಕೋರ್ಟ್ ಈ ಹಾಡಿನ ಬಳಕೆಗೆ ತಡೆಯಾಜ್ಞೆ ನೀಡಿದೆ.
Advertisement
ಕೇರಳದ ತೈಕುಡಂ ಬಿಡ್ಜ್ ಬ್ಯಾಂಡ್ (Thaikudam Bidge Band) ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ತಮ್ಮ ಬ್ಯಾಂಡ್ ನ ಹಾಡಿನಿಂದ ಕದಿಯಲಾಗಿದೆ ಎಂದು ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿತ್ತು. ಕಾನೂನು ರೀತಿಯಲ್ಲಿ ಹೋರಾಟ ಮಾಡುವುದಾಗಿಯೂ ತಿಳಿಸಿತ್ತು. ಹಾಗಾಗಿ ತಂಡವು ಕೊಯಿಕ್ಕೋಡು ಕೋರ್ಟ್ ಗೆ ಮೊರೆ ಹೋಗಿತ್ತು. ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೈಕ್ಕುಡಂ ಬ್ರಿಡ್ಜ್ ನ ಅನುಮತಿ ಇಲ್ಲದೇ ಈ ಹಾಡನ್ನು ಬಳಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ. ಇದನ್ನೂ ಓದಿ: ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್
Advertisement
Advertisement
ಈ ಕುರಿತು ಸ್ವತಃ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ‘ನಮ್ಮ ನವರಸಂ (Navarasam) ಮತ್ತು ವರಾಹ ರೂಪಂ ಹಾಡು ಅದೊಂದು ಹೋಲಿಕೆಯಲ್ಲಿ ನಮ್ಮ ಸಂಗೀತವನ್ನು ಕದಿಯಲಾಗಿದೆ’ ಎಂದು ಈ ಹಿಂದೆ ಬ್ಯಾಂಡ್ ಆರೋಪ ಮಾಡಿತ್ತು. ಕಾಂತಾರ ಟೀಮ್ ಹಾಡನ್ನು ಪ್ರೇರಿತವಾಗಿ ತಗೆದುಕೊಂಡಿಲ್ಲ, ಕೃತಿಚೌರ್ಯ ಮಾಡಿದೆ ಎಂದೂ ಹೇಳಿದ್ದರು. ಇದೀಗ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.