ಈಗಾಗಲೇ ಕಾಂತಾರ ಸಿನಿಮಾದ ಸ್ಪೆಷಲ್ ಸ್ಕ್ರೀನಿಂಗ್ ಅನೇಕ ಕಡೆಗಳಲ್ಲಿ ನಡೆದಿವೆ. ಆದರೆ, ಈವರೆಗೂ ಕನ್ನಡದ ಯಾವುದೇ ಸಿನಿಮಾ ಕೊಯಂಬತ್ತೂರಿನ (Coimbatore) ಇಶಾ ಫೌಂಡೇಶನ್ (Isha Foundation) ನಲ್ಲಿ ಪ್ರದರ್ಶನ ಕಂಡಿರಲಿಲ್ಲ. ಇದೀಗ ಮೊದಲ ಬಾರಿಗೆ ಕಾಂತಾರ (Kantara) ಅಲ್ಲಿ ವಿಶೇಷ ಪ್ರದರ್ಶನ ಕಂಡಿದ್ದು, ಈ ಕುರಿತು ಇಶಾ ಫೌಂಡೇಶನ್ ತನ್ನ ಅಧಿಕೃತ ಪೇಜಿನಲ್ಲಿ ಬರೆದುಕೊಂಡಿದೆ. ಚಿತ್ರದ ಬಗ್ಗೆ ಹೊಗಳಿಕೆಯ ಮಾತುಗಳನ್ನೂ ಆಡಿದೆ.
Advertisement
ಇಶಾ ಫೌಂಡೇಶನ್ ಯೋಗ ಕೇಂದ್ರದಲ್ಲಿ ಸಾಮಾನ್ಯವಾಗಿ ಸಿನಿಮಾಗಳನ್ನು ತೋರಿಸುವುದಿಲ್ಲವಂತೆ. ಈ ಹಿಂದೆ ಕಂಗನಾ ರಣಾವತ್ ನಟನೆಯ ಮಣಿಕರ್ಣಿಕ ಚಿತ್ರವನ್ನು ಪ್ರದರ್ಶಿಸಲಾಗಿತ್ತು. ಅದರ ನಂತರ ಕಾಂತಾರಕ್ಕೆ ಈ ಯೋಗ ಸಿಕ್ಕಿದೆ. ದಕ್ಷಿಣ ಭಾರತದಲ್ಲೇ ಇಶಾ ಫೌಂಡೇಶನ್ ನಲ್ಲಿ ಪ್ರದರ್ಶನವಾದ ಮೊದಲ ಸಿನಿಮಾ ಕಾಂತಾರ ಆಗಿದೆ. ಈ ಕುರಿತು ಹೆಮ್ಮೆಯಿಂದಲೇ ಫೌಂಡೇಶನ್ ಬರೆದುಕೊಂಡಿದೆ.
Advertisement
Advertisement
ದೇಶಾದ್ಯಂತ ಕಾಂತಾರ ಸಿನಿಮಾ ಗೆಲುವಿನ ಓಟವನ್ನು ಮುಂದುವರೆಸಿದೆ. ದೀಪಾವಳಿ ಹಬ್ಬದ ರಜೆಯ ಕಾರಣದಿಂದಾಗಿ ಬಾಕ್ಸ್ ಆಫೀಸ್ ಭರ್ತಿ ಭರ್ತಿ ಆಗುತ್ತಿದೆ. ಇದೊಂದು ಐತಿಹಾಸಿಕ, ಮಹಾ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಈ ಗೆಲುವನ್ನು ರಿಷಬ್ ಶೆಟ್ಟಿ (Rishabh Shetty) ದೈವಕ್ಕೆ ಅರ್ಪಿಸಿದ್ದಾರೆ. ಈ ಸಿನಿಮಾ ಗೆಲ್ಲಲು ದೈವ ಕಾರಣ, ಜನರಲ್ಲಿ ನಾನು ದೇವರನ್ನು ಕಾಣುತ್ತೇನೆ ಎಂದು ಹೇಳಿದ್ದಾರೆ ರಿಷಬ್.
Advertisement
ಅತ್ಯುತ್ತಮ ಚಲನಚಿತ್ರಗಳನ್ನು ನಿರ್ಮಿಸಿ ಕನ್ನಡಿಗರ ಮನೆಮಾತಾಗಿರುವ ಹೆಮ್ಮೆಯ ‘ಹೊಂಬಾಳೆ ಫಿಲಮ್ಸ್ ‘ , ಚಿತ್ರರಸಿಕರ ನಿರೀಕ್ಷೆಯಂತೆ ಸತತವಾಗಿ ಯಶಸ್ವಿ ಚಿತ್ರಗಳನ್ನು ದೇಶದ ಚಲನಚಿತ್ರರಂಗಕ್ಕೆ ಕೊಡುಗೆಯಾಗಿ ನೀಡಿ ಮೆಚ್ಚುಗೆ ಗಳಿಸಿದೆ. ‘ಕಾಂತಾರ’ ದೇಶ-ವಿದೇಶಗಳಲ್ಲಿ ಜನಮೆಚ್ಚುಗೆ ಗಳಿಸಿ ಭರ್ಜರಿ ಯಶಸ್ಸು ಕಂಡಿದೆ. ಇದೀಗ ಕಾಂತಾರ ಬಿಡುಗಡೆಯಾದ ಇಪ್ಪತ್ತೈದು ದಿನಕ್ಕೆ ಹೊಸ ದಾಖಲೆಯೊಂದನ್ನು ನಿರ್ಮಿಸಿರುವುದು ಹೊಂಬಾಳೆ ಫಿಲಮ್ಸ್ ಯಶಸ್ಸಿನ ಮುಕುಟಕ್ಕೆ ಹೊಸ ಗರಿ ಮೂಡಿದೆ.
ಈವರೆಗೆ ಹೊಂಬಾಳೆ ಬ್ಯಾನರ್ ನಲ್ಲಿ ನಿರ್ಮಿಸಿದ ಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನರು ವೀಕ್ಷಿಸಿದ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕರ್ನಾಟಕದಲ್ಲಿ 25 ದಿನಗಳಲ್ಲಿ 77 ಲಕ್ಷ ಮಂದಿ ಸಿನಿಮಾಪ್ರಿಯರು ಕಾಂತಾರ ವೀಕ್ಷಿಸಿರುವುದು ಹೊಸ ದಾಖಲೆಯಾಗಿದೆ.