ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಈಗಾಗಲೇ 50 ದಿನಗಳನ್ನು ಪೂರೈಸಿದೆ. ಬಾಕ್ಸ್ ಆಫೀಸಿನಲ್ಲಿ ಎಲ್ಲ ದಾಖಲೆಗಳನ್ನು ಪುಡಿಗಟ್ಟಿ ಮುನ್ನುಗ್ಗುತ್ತಿದೆ. ಕರಾವಳಿ ದೈವಗಳ ಕುರಿತಾದ ಈ ಸಿನಿಮಾ, ಪ್ರಪಂಚದಾದ್ಯಂತ ತೆರೆಕಂಡ ಸಂದರ್ಭದಲ್ಲಿ ನಟ ಚೇತನ್, ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಚೇತನ್ ಹೇಳಿಕೆ ಹಲವರ ಕಣ್ಣುಗಳನ್ನು ಕೆಂಪಾಗಿಸಿತ್ತು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು.
Advertisement
ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ, ತಮ್ಮ ಮಾತುಗಳನ್ನು ಸಮರ್ಥಿಸಿಕೊಂಡೇ ಬಂದಿದ್ದರು ಚೇತನ್. ಆನಂತರ ತಮ್ಮ ಮೇಲಿನ ಎಫ್.ಐ.ಆರ್ ಅನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ ಮೋರೆ ಹೋಗಿದ್ದರು. ಇದೀಗ ಎಫ್.ಐ.ಆರ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ. ಈ ಅರ್ಜಿ ವಿಚಾರಣೆಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಪೀಠ, ಪ್ರಕರಣವಿನ್ನೂ ತನಿಖಾ ಹಂತದಲ್ಲಿ ಇರುವುದರಿಂದ ಈ ಹಂತದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಬಾರದು ಎಂದು ಅರ್ಜಿ ವಜಾಗೊಳಿಸಿದೆ. ಇದನ್ನೂ ಓದಿ:ಮೊದಲ ಬಾರಿಗೆ ಮುದ್ದು ಮಗಳ ಫೋಟೋ ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ
Advertisement
Advertisement
ಚೇತನ್ ಪರ ವಕೀಲರು ‘ಅರ್ಜಿದಾರರ ಮಾತಿನಿಂದ ಸಮಾಜದಲ್ಲಿ ಅಶಾಂತಿ ಮೂಡಿಲ್ಲ. ಯಾರಿಗೂ ತೊಂದರೆ ಕೊಡುವ ಉದ್ದೇಶವೂ ಅವರದ್ದಲ್ಲ. ತೊಂದರೆಯೂ ಆಗಿಲ್ಲ. ಹಾಗಾಗಿ ಎಫ್.ಐ.ಆರ್ ರದ್ದು ಮಾಡಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸರಕಾರದ ಪರ ವಕೀಲರು ಆಕ್ಷೇಪಿಸಿದರು. ಉದ್ದೇಶಪೂರ್ವಕವಾಗಿಯೇ ಇಂತಹ ಹೇಳಿಕೆ ನೀಡಿದ್ದಾರೆ ಎಂದು ವಾದಿಸಿದರು. ಪ್ರಕರಣ ತನಿಖೆಯ ಹಂತದಲ್ಲಿ ಇರುವುದರಿಂದ ಎಫ್.ಐ.ಆರ್ ರದ್ದು ಮಾಡಬಾರದು ಎಂದು ಮನವಿ ಮಾಡಿದರು. ಇವರ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿತು.
Advertisement
ಭೂತಕೋಲದ ಬಗ್ಗೆ ಚೇತನ್ ಆಡಿದ ಮಾತುಗಳು ಅಂದು ಸಾಕಷ್ಟು ಟೀಕೆಗೆ ಗುರಿಯಾಗಿದ್ದವು. ಕರಾವಳಿಯ ದೈವಗಳ ಬಗ್ಗೆ ಚೇತನ್ ತಿಳಿದುಕೊಂಡು ಮಾತನಾಡಬೇಕು ಎಂದು ಹಲವರು ಸಲಹೆ ನೀಡಿದರು. ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದರು. ನಂತರ ದೂರು ದಾಖಲಾಗಿತ್ತು. ದೂರು ಇದೀಗ ತನಿಖಾ ಹಂತದಲ್ಲಿದ್ದು, ಚೇತನ್ ತನಿಖೆಯನ್ನು ಎದುರಿಸಬೇಕಿದೆ.