ನವದೆಹಲಿ: ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿ ಮುಖ್ಯಮಂತ್ರಿ ಪಟ್ಟವನ್ನು ಏರಿದ್ದ ಕೇಜ್ರಿವಾಲ್ ವಿರುದ್ಧ 2 ಕೋಟಿ ಲಂಚ ತೆಗೆದುಕೊಂಡಿರುವ ಗಂಭೀರ ಆರೋಪ ಕೇಳಿಬಂದಿದೆ.
ಪ್ರವಾಸೋದ್ಯಮ ಸಚಿವ ಸ್ಥಾನದಿಂದ ವಜಾಗೊಂಡಿರುವ ಕಪಿಲ್ ಮಿಶ್ರಾ ಅವರು, ಕೇಜ್ರಿವಾಲ್ ಸತ್ಯೇಂದ್ರ ಜೈನ್ ರಿಂದ 2 ಕೋಟಿ ರೂ. ಲಂಚ ಪಡೆದಿದ್ದಾರೆ. ಲಂಚ ಪಡೆದಿರುವುದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ಹೇಳಿದ್ದಾರೆ.
Advertisement
ಕುಮಾರ್ ವಿಶ್ವಾಸ್ ಅವರ ಜತೆಗೂಡಿ ಆಮ್ ಆದ್ಮಿ ಪಕ್ಷದ ನಾಯಕತ್ವದ ವಿರುದ್ಧವೇ ಸಡ್ಡು ಹೊಡೆದಿದ್ದ ಪ್ರವಾಸೋದ್ಯಮ ಸಚಿವ ಕಪಿಲ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ.ಇದೇ ವೇಳೆ ನಾನು ಆಪ್‍ನ ಸ್ಥಾಪಕ ಸದಸ್ಯನಾಗಿದ್ದು, ಆಪ್ ನಲ್ಲೇ ಇರುತ್ತೇನೆ. ಬಿಜೆಪಿ ಪಕ್ಷವನ್ನು ಸೇರುವುದಿಲ್ಲ ಎಂದು ಹೇಳಿದರು.
Advertisement
ಮಂತ್ರಿ ಸ್ಥಾನದಿಂದ ವಜಾ ಮಾಡುತ್ತಿದ್ದಂತೆ ಮಿಶ್ರಾ, ಹಗರಣದಲ್ಲಿ ತೊಡಗಿದ ಕೆಲ ಆಮ್ ಆದ್ಮಿ ಪಕ್ಷದ ನಾಯಕರ ಬಣ್ಣ ಬಯಲು ಮಾಡುತ್ತೇನೆಂದು ಎಂದು ಹೇಳಿದ್ದರು.
Advertisement
ಭ್ರಷ್ಟಾಚಾರ ಆರೋಪವಿಲ್ಲದ, ಸಿಬಿಐ ವಿಚಾರಣೆ ಎದುರಿಸದ ಏಕೈಕ ಸಚಿವ ನಾನು. ನನಗೆ ಮಾಹಿತಿಯನ್ನೂ ನೀಡದೆ ನನ್ನನ್ನು ಸಂಪುಟದಿಂದ ಹೊರಹಾಕಲಾಗಿದೆ ಕೇಜ್ರಿವಾಲ್ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದರು.
Advertisement
I am founder member of AAP and will always remain in the party: AAP leader Kapil Mishra on the question of joining BJP pic.twitter.com/8esiwH7EA2
— ANI (@ANI_news) May 7, 2017
When I became minister I sent a report against Sheila Dikshit to CM. What happened to that report after that everyone knows:Kapil Mishra pic.twitter.com/Zb8wr2SK6v
— ANI (@ANI_news) May 7, 2017
Parson maine Satyendra Jain ji ko Rs 2 crore Arvind Kejriwal ji ko dete huye dekha tha. Main poori raat so nahi paaya: Kapil Mishra
— ANI (@ANI_news) May 7, 2017
i have witnessed HIM taking illegal cash.. have shared all details with Lt. Gov.
चुप रहना असंभव था। कुर्सी क्या प्राण भी जाये तो जाए
— Kapil Mishra (@KapilMishraAAP) May 7, 2017