ಬೆಂಗಳೂರು: ನಿರೀಕ್ಷೆಯಂತೆ ಕೊಪ್ಪಳದ (Koppala) ಬಿಜೆಪಿ ಸಂಸದ ಕರಡಿ ಸಂಗಣ್ಣ (Karadi Sanganna) ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪಕ್ಷದ ಬಾವುಟ ನೀಡಿದ ಕರಡಿ ಸಂಗಣ್ಣನವರನ್ನ ಪಕ್ಷಕ್ಕೆ ಬರಮಾಡಿಕೊಂಡರು.
ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಅವರು,ಇವತ್ತು ಸಂಭ್ರಮದ ದಿನ.ಇವತ್ತು ನಾನು ಕಾಂಗ್ರೆಸ್ ಸೇರಲು ಸವದಿ ಕಾರಣ. ಸಿದ್ದರಾಮಯ್ಯ ಜೊತೆ ಕೆಲಸ ಮಾಡಿದ್ದೇನೆ. ಡಿಕೆ ಶಿವಕುಮಾರ್ (DK Shivakumar) ಪಕ್ಷೇತರರವಾಗಿ ಗೆದ್ದಾಗ ನಾನು ಗೆದ್ದಿದ್ದೆ ಎಂದು ಹೇಳಿದರು. ಇದನ್ನೂ ಓದಿ: ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರ್ಪಡೆ
Advertisement
Advertisement
ಹೆಚ್‌ಜಿ. ರಾಮುಲು ಅವರು ನನ್ನ ರಾಜಕೀಯ ಗುರು. ಖಾದ್ರಿ ಅವರನ್ನ ನೆನಪು ಮಾಡಿಕೊಳ್ಳುತ್ತೇನೆ. ಕಾಂಗ್ರೆಸ್ ಪಕ್ಷದ ಸಿದ್ದಾಂತ ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂಬ ಚಾಲೆಂಜ್ ಮಾಡಿದ್ದೇವೆ ಎಂದರು. ಇದನ್ನೂ ಓದಿ: 500 ವರ್ಷದ ಬಳಿಕ ರಾಮನವಮಿಯಂದು ಅಯೋಧ್ಯೆಯಲ್ಲಿ ಬಾಲ ರಾಮನಿಗೆ ಅಭಿಷೇಕ, ಸೂರ್ಯ ತಿಲಕ!
Advertisement
ನಾನು ಅಧಿಕಾರಕ್ಕೆ ಬಂದಿಲ್ಲ. ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷ ಸೇರ್ಪಡೆ ಖುಷಿ ಕೊಟ್ಟಿದೆ. ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ, ತ್ಯಾಗ ಬಲಿದಾನ ಮಾಡಿದ ಪಕ್ಷ ಎಂದು ಕಾಂಗ್ರೆಸ್ ಪಕ್ಷವನ್ನು ಹಾಡಿ ಹೊಗಳಿದರು.
Advertisement
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೆ ನೀಡಬೇಕೆಂದು ಕರಡಿ ಸಂಗಣ್ಣ ಬಿಗಿಪಟ್ಟು ಹಿಡಿದಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಅವರ ಹಿರಿಯ ಸೊಸೆ ಮಂಜುಳಾಗೆ ನೀಡಿದ್ದರು. ಆದರೆ ಅವರು ಚುನಾವಣೆಯಲ್ಲಿ ಸೋತಿದ್ದರು. ಈ ಲೋಕಸಭಾ ಚುನಾವಣೆಯಲ್ಲೂ ಕರಡಿ ಸಂಗಣ್ಣ ಬಿಜೆಪಿ ಟಿಕೆಟ್ ಬಯಸಿದ್ದರು. ಆದರೆ ಬಿಜೆಪಿ ಈ ಬಾರಿ ವೈದ್ಯ ಬಸವರಾಜ ಎಸ್ ಕ್ಯಾವಟೂರ್ ನೀಡಿತ್ತು.