ಬಾಲಿವುಡ್ನ ಖ್ಯಾತ ನಿರೂಪಕ, ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹಾರ್ ಇದೇ ತಿಂಗಳು ಮೇ 25ಕ್ಕೆ ಅವರಿಗೆ 50 ವರ್ಷ. ಈ ಬಾರಿಯ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲೇ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ದಕ್ಷಿಣದ ಅನೇಕ ಸ್ಟಾರ್ ನಟರನ್ನು ಮತ್ತು ನಿರ್ದೇಶಕರನ್ನು ತಮ್ಮ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸುತ್ತಿದ್ದಾರೆ ಎನ್ನುವ ಸುದ್ದಿ ಸಿಕ್ಕಿದೆ. ಇದನ್ನೂ ಓದಿ: ಫ್ಯಾಟ್ ಸರ್ಜರಿ ಎಫೆಕ್ಟ್ – ಕಿರುತೆರೆ ನಟಿ ಚೇತನಾ ರಾಜ್ ಸಾವು
ಕರಣ್ ಜೋಹಾರ್ ಹುಟ್ಟುಹಬ್ಬವೆಂದರೆ ಬಿಟೌನ್ನಲ್ಲಿ ವಿಶೇಷತೆ ಇದ್ದೇ ಇರುತ್ತದೆ. ಬಹುತೇಕ ಬಾಲಿವುಡ್ ಸಿಲೆಬ್ರಿಟಿಗಳು ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುತ್ತಾರೆ. ಈ ಬಾರಿಯ ಸ್ಪೆಷಲ್ ಅಂದರೆ, ಕನ್ನಡದ ಯಶ್, ನಿರ್ದೇಶಕ ಪ್ರಶಾಂತ್ ನೀಲ್, ತೆಲುಗಿನ ಜೂನಿಯರ್ ಎನ್ಟಿಆರ್ ಹಾಗೂ ರಾಜಮೌಳಿ ಸೇರಿದಂತೆ ಹಲವು ಸಿಲೆಬ್ರಿಟಿಗಳನ್ನು ಆಹ್ವಾನಿಸಿದ್ದಾರಂತೆ. ಇದನ್ನೂ ಓದಿ: ರಾಖಿ ಸಾವಂತ್ ಹೊಸ ಬಾಯ್ಫ್ರೆಂಡ್ ಮೈಸೂರಿನವನು : ಗೆಳೆಯ ಕೊಟ್ಟ ದುಬಾರಿ ಉಡುಗೊರೆ
ಕರಣ್ ಜೋಹಾರ್ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಹೋಸ್ಟ್ ಮಾಡಿದ್ದರು. ಆ ಮೂಲಕ ದಕ್ಷಿಣದ ಮೊದಲ ಕಾರ್ಯಕ್ರಮದಲ್ಲಿ ಅವರು ನಿರೂಪಕರಾಗಿ ಕಾಣಿಸಿಕೊಂಡಿದ್ದರು. ಅಲ್ಲಿಂದ ಯಶ್ ಮತ್ತು ಅವರ ಮಧ್ಯ ಒಂದೊಳ್ಳೆ ಬಾಂಧವ್ಯವೂ ಏರ್ಪಟ್ಟಿದೆ. ಇದೆಲ್ಲ ಕಾರಣಕ್ಕಾಗಿ ಈ ಬಾರಿ ಯಶ್ ಅವರು ಕರಣ್ ಜೋಹಾರ್ ಅವರ ಬರ್ತ್ಡೇ ಪಾರ್ಟಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಇದೆ.
ಐವತ್ತು ವರ್ಷ ತುಂಬಿದ ಸಂದರ್ಭದಲ್ಲಿ ವಿಭಿನ್ನ ರೀತಿಯಲ್ಲೇ ಕರಣ್ ಜೋಹಾರ್ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರಂತೆ. ಅಲ್ಲದೇ ಈವರೆಗೂ ತಮ್ಮ ಸಿನಿಮಾದಲ್ಲಿ ಕೆಲಸ ಮಾಡಿದ ಬಹುತೇಕ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಆಹ್ವಾನ ಹೋಗಿದೆಯಂತೆ. ಇದೊಂದು ರೀತಿಯಲ್ಲಿ ಬರ್ತ್ಡೇ ಪಾರ್ಟಿ ಅನ್ನುವುದಕ್ಕಿಂತ ಧನ್ಯವಾಗಳನ್ನು ಹೇಳುವ ಕಾರ್ಯಕ್ರಮವಾಗಿ ರೂಪುಗೊಂಡಿದೆ ಎನ್ನುತ್ತಿದೆ ಬಿಟೌನ್.