ಬೆಂಗಳೂರು: ಸರ್ಕಾರಿ ವಾಹನಗಳು ಖಾಸಗಿ ಕಾರ್ಯಕ್ರಮಗಳಿಗೆ ಬಳಕೆ ಆಗುತ್ತಿವೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಶಾಕಿಂಗ್ ನ್ಯೂಸ್ ನೀಡಿದ್ದಾರೆ.
ಕಚೇರಿಗಳಿಗೆ ಬರುವ ಅಧಿಕಾರಿಗಳು ಓಲಾ, ಊಬರ್‍ನಂತಹ ಆ್ಯಪ್ ಆಧಾರಿತ ಟ್ಯಾಕ್ಸಿಗಳ ಸೇವೆಯನ್ನು ಯಾಕೆ ಬಳಸಬಾರದು. ಇದರ ಸಾಧಕ ಬಾಧಕಗಳ ಬಗ್ಗೆ ವರದಿ ನೀಡಿ ಅಂತ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಒಂದು ವೇಳೆ ಸಾರಿಗೆ ಇಲಾಖೆ ಮುಖ್ಯ ಕಾರ್ಯದರ್ಶಿಯವರ ಈ ನಿರ್ಧಾರವನ್ನ ಒಪ್ಪಿದ್ರೆ ಮುಂದಿನ ತಿಂಗಳನಿಂದಲೇ ಐಎಎಸ್ ಅಧಿಕಾರಿಗಳು ಓಲಾ, ಊಬರ್ ಬುಕ್ ಮಾಡಲು ರೆಡಿಯಾಗಿರಬೇಕು.
Advertisement
ಮಿತವ್ಯಯ ಸರ್ಕಾರಕ್ಕಾಗಿ ಈ ಕುರಿತು ಆಲೋಚಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಒಂದು ಕಡೆ ಅಧಿಕಾರಿಗಳು ತಮ್ಮ ಖಾಸಗಿ ಕೆಲಸಗಳಿಗೂ ಸರ್ಕಾರಿ ವಾಹನ ಬಳಕೆ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಮುಖ್ಯ ಕಾರ್ಯದರ್ಶಿಗಳಿಗೆ ಸಲಹೆ ಕೇಳಿ ಪತ್ರ ಬರೆದಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv