ನವದೆಹಲಿ: ಭಾರತ ಜಾತ್ಯತೀತ ರಾಷ್ಟ್ರ ಎಂದು ಇಂದು ನಿಜವಾಗಿದೆ. ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ. ವಿಶೇಷವಾಗಿ ಕರ್ನಾಟಕ ಜನರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್ ಮುನಿಯಪ್ಪ (K H Muniyappa) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಪಕ್ಷವನ್ನು ಸ್ಪಷ್ಟವಾಗಿ ಬಹುಮತ ತಂದಿದ್ದಕ್ಕೆ ಕರ್ನಾಟಕ ಜನತೆಗೆ ಧನ್ಯವಾದಗಳು. ಈ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾಗಿತ್ತು. ಹೀಗಾಗಿ ಜನತೆ ಕಾಂಗ್ರೆಸ್ ಪಕ್ಷದ ಅಧಿಕಾರಕ್ಕೆ ತಂದಿದ್ದಾರೆ. ಪ್ರಜಾಪ್ರಭುತ್ವ ಇದು ಉಳಿದಿದೆ. ಕರ್ನಾಟಕ ಜನತೆಗೆ ಕೋಟಿ ಕೋಟಿ ನಮಸ್ಕಾರಗಳು ಎಂದರು.
ಬಿಜೆಪಿ (BJP) ಕೋಮು ಗಲಭೆ ಮಾಡಿ ಮುಂದೆ ಇಟ್ಟು ಅಧಿಕಾರಿಕ್ಕೆ ಬಂದಿದ್ದರು. ಭಾರತ ಜಾತ್ಯತೀತ ರಾಷ್ಟ್ರ ಎಂದು ಇಂದು ನಿಜವಾಗಿದೆ. ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿ ಎಂದು ತಿಳಿಸಿದರು. ಇದನ್ನೂ ಓದಿ: ರಾಜಕೀಯದಿಂದ ನಿವೃತ್ತಿ ಘೋಷಿಸಿದ ರೇಣುಕಾಚಾರ್ಯ
ಇದೇ ವೇಳೆ ಕಾಂಗ್ರೆಸ್‍ನಲ್ಲಿ ಸಿಎಂ ಯಾರಾಗ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಂದು ಸಂಜೆ ಮೀಟಿಂಗ್ ಇದೆ. ಯಾರನ್ನ ಮುಖ್ಯಮಂತ್ರಿ ಮಾಡ್ತಾರೆ ಹೈಕಮಾಂಡ್ ಡಿಸೈಡ್ ಮಾಡ್ತಾರೆ. ನಮಗೆ ಸಚಿವ ಸ್ಥಾನದ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ. ಪಕ್ಷ ಏನು ಹೇಳುತ್ತೆ ಅದು ನಾನು ಮಾಡ್ತೇನೆ ಎಂದು ಸ್ಪಷ್ಟಪಡಿಸಿದರು.