ಬೀದರ್: ಸತತ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ (Rain) ಹಿನ್ನೆಲೆಯಲ್ಲಿ ಬೀದರ್ (Bidar) ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯ (Karanja Dam) ಬಹುತೇಕ ಭರ್ತಿಯಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ (Manjra River) ಒಂದು ಗೇಟ್ ಮೂಲಕ ಒಟ್ಟು 318 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಒಟ್ಟು 7.69 ಟಿಎಂಸಿ ಸಾಮರ್ಥ್ಯದ ಕಾರಂಜಾ ಜಲಾಶಯದಲ್ಲಿ ಈಗಾಗಲೇ 7.51 ಟಿಎಂಸಿ ನೀರು ಸಂಗ್ರಹವಾಗಿದ್ದು ಬಹುತೇಕ ಭರ್ತಿಯಾಗಿದೆ. ಇನ್ನೂ ನಾಲ್ಕೈದು ದಿನಗಳ ಕಾಲ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: 2ನೇ ಮದುವೆಗೆ ಅಡ್ಡಿಯಾಗುತ್ತೆ ಎಂದು 14 ತಿಂಗಳ ಮಗುವನ್ನೇ ಕೊಂದ ಪಾಪಿ ತಂದೆ
Web Stories