ಯೋಗರಾಜ್ ಭಟ್ (Yogaraj Bhat) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ, ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ (Shivaraj Kumar) ಮತ್ತು ಪ್ರಭುದೇವ (Prabhu Deva) ಜೊತೆಯಾಗಿ ನಟಿಸುತ್ತಿರುವ ‘ಕರಟಕ ದಮನಕ’ (Karataka Damanaka) ಚಿತ್ರದ ಮೋಷನ್ ಪೋಸ್ಟರ್ (Motion Poster) ರಿಲೀಸ್ ಆಗಿದೆ. ಪ್ರಮುಖ ಪಾತ್ರಗಳು ಮತ್ತು ಆ ಪಾತ್ರಗಳ ಪ್ರತಿಮೆಯನ್ನು ತೋರಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಕರಟಕ ದಮನಕ ಎರಡು ಕುತಂತ್ರ ನರಿಗಳ ಕಥನವನ್ನೂ ಈ ಮೋಷಲ್ ಪೋಸ್ಟರ್ ನಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ.
Advertisement
ಇದೀಗ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಇಂದಿಗೆ ಈ ಚಿತ್ರ ಪ್ರಾರಂಭವಾಗಿ ಒಂದು ವರ್ಷಗಳಾಗಿದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, ಕರಟಕ ದಮನಕ ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಇಬ್ಬರನ್ನು ಹೆಚ್ಚು ಸಲ ಒಟ್ಟಾಗಿ ನೋಡಿದಾಗ ಕರಟಕ ದಮನಕ ಎನ್ನುವುದು ಉಂಟು. ನಮ್ಮ ಚಿತ್ರದಲ್ಲಿ ಈ ಪಾತ್ರಗಳನ್ನು ಶಿವಣ್ಣ ಹಾಗೂ ಪ್ರಭುದೇವ ಮಾಡಿದ್ದಾರೆ. ಅವರಿಬ್ಬರ ಎನರ್ಜಿ ನೋಡಿದರೆ ನಿಜಕ್ಕೂ ಖುಷಿಯಾಗುತ್ತದೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯ ಏಳು ಹಾಡುಗಳು ಚಿತ್ರದಲ್ಲಿದೆ. ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಾಹಕರು. ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ ನಾಯಕಿಯರು. ಮುಖ್ಯ ಮಂತ್ರಿ ಚಂದ್ರು ಹಾಗೂ ತನಿಕೆಲ್ಲ ಭರಣಿ ಅವರಂತಹ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾನು ಹಾಗೂ ರಾಕ್ ಲೈನ್ ವೆಂಕಟೇಶ್ ಅವರು ಸಹ ನಟಿಸಿದ್ದೇವೆ. ಶೇಕಡಾ ತೊಂಬತ್ತು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡಿನ ಚಿತ್ರೀಕರಣ ಬಾಕಿ ಇದೆ ಎಂದರು. ಇದನ್ನೂ ಓದಿ:2023: ಅತ್ಯುತ್ತಮ ಸಿನಿಮಾ, ರಾಕೆಟ್ರಿ ದಿ ನಂಬಿ ಎಫೆಕ್ಟ್
Advertisement
Advertisement
ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ಯೋಗರಾಜ್ ಭಟ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಹರಿಕೃಷ್ಣ ಸುಮಧುರ ಹಾಡುಗಳನ್ನು ನೀಡುತ್ತಿದ್ದಾರೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ತಿಳಿಸಿದರು.
Advertisement
ಶಿವರಾಜಕುಮಾರ್ ಅವರ ಎನರ್ಜಿ ನೋಡಿದರೆ ಖುಷಿಯಾಗುತ್ತದೆ. ಅವರ ಜೊತೆ ನಟಿಸುತ್ತಿರುವುದು ಹೆಚ್ಚಿನ ಸಂತಸ ತಂದಿದೆ. ಯೋಗರಾಜ್ ಭಟ್ ಅವರ ನಿರ್ದೇಶನ ಹಾಗೂ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದರು ಪ್ರಭುದೇವ. ನಾಯಕಿಯರಾದ ನಿಶ್ವಿಕಾ ನಾಯ್ಡು, ಪ್ರಿಯ ಆನಂದ್, ಹಿರಿಯ ಕಲಾವಿದರಾದ ಮುಖ್ಯ ಮಂತ್ರಿ ಚಂದ್ರು, ತನಿಕೆಲ್ಲ ಭರಣಿ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಛಾಯಾಗ್ರಹಣದ ಬಗ್ಗೆ ಸಂತೋಷ್ ರೈ ಪಾತಾಜೆ ಮಾತನಾಡಿದರು.
Web Stories