ನಾಳೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

Advertisements

ಉಡುಪಿ/ಮಂಗಳೂರು: ಕರಾವಳಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜ್‍ಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

Advertisements

ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸರಾಸರಿ 80mlನಷ್ಟು ಮಳೆಯಾಗುತ್ತಿದೆ. ಕಳೆದ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮುಂಜಾನೆಯಿಂದ ಸಂಜೆವರೆಗೂ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು ಜುಲೈ 1ಕ್ಕೂ ವಿಸ್ತರಣೆ ಮಾಡಿದೆ. ಜಿಲ್ಲೆಯ ಏಳು ತಾಲೂಕಿನಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ ಹೀಗಾಗಿ ರಜೆ ಘೋಷಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದನ್ನೂ ಓದಿ: ದೇಶೀಯ ಭಯೋತ್ಪಾದನೆಗೆ ಮದರಸಾಗಳೇ ಕಾರಣ – ಹಿಂದೂ ಜಾಗರಣಾ ವೇದಿಕೆ ಕಿಡಿ

Advertisements

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಪ್ರಕಟಣೆ ಹೊರಡಿಸಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಅಂಗನವಾಡಿಯಿಂದ ಪದವಿ ತರಗತಿಯವರೆಗಿನ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜ್‍ಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ತಮ್ಮ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜ್‍ಗಳಿಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಈ ಆದೇಶದ ಪ್ರತಿಯನ್ನು ರವಾನಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ- ಮನೆಗಳಿಗೆ ನುಗ್ಗಿದ ನೀರು

Advertisements

ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದಿದ್ದು, ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜ್‍ಗಳಿಗೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ರಜೆ ಘೋಷಣೆ ಮಾಡಿದ್ದಾರೆ. ಹವಾಮಾನ ಇಲಾಖೆ ನಾಳೆಯೂ ದ.ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

Live Tv

Advertisements
Exit mobile version