ಬೆಂಗಳೂರು: ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆಯ (KaRaVe) 15 ಕಾರ್ಯಕರ್ತರು ಬಿಡುಗಡೆಯಾಗಿದ್ದಾರೆ.
ಬುಧವಾರ ಲ್ಯಾವೆಲ್ಲೆ ರಸ್ತೆಯಲ್ಲಿ ಇಂಗ್ಲಿಷ್ ಬೋರ್ಡ್ (English Board) ಒಡೆದು ಹಾಕಿದ ಹಿನ್ನೆಲೆ ಕಬ್ಬನ್ ಪಾರ್ಕ್ ಪೊಲೀಸರು ಅರೆಸ್ಟ್ ಮಾಡಿದ್ದರು. ಬುಧವಾರ ರಾತ್ರಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ 15 ಮಂದಿಗೆ ಎಂಟನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಹೊಸ ವರ್ಷಕ್ಕೂ ಮುನ್ನವೇ ಪೆಟ್ರೋಲ್, ಡೀಸೆಲ್ ದರದಲ್ಲಿ 10 ರೂ. ಇಳಿಕೆ?
Advertisement
Advertisement
ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಪರಪ್ಪನ ಅಗ್ರಹಾರದಿಂದ ಕರವೇ ಕಾರ್ಯಕರ್ತರು ಬಿಡುಗಡೆಯಾಗಿದ್ದಾರೆ. ಕರವೇ ಕಾರ್ಯಕರ್ತರು ಜೈಲಿನಿಂದ ಬಿಡುಗಡೆಯಾಗುವ ಮೊದಲು ಜೈಲು ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಬ್ಯಾರಿಕೇಡ್ ಹಾಕಿ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪರಪ್ಪನ ಅಗ್ರಹಾರ ಪೊಲೀಸರು ಭದ್ರತೆ ಕೈಗೊಂಡಿದ್ದರು.
Advertisement
ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಇನ್ನೂ ಕೇಂದ್ರ ಕಾರಾಗೃಹದಲ್ಲೇ ಇದ್ದು ಅವರಿಗೆ ಜಾಮೀನು ದೊರೆತಿಲ್ಲ. ಇದನ್ನೂ ಓದಿ: ಗಲ್ಲು ಶಿಕ್ಷೆ ರದ್ದು – ಕತಾರ್ ಜೈಲಿನಲ್ಲಿರುವ 8 ಭಾರತೀಯರಿಗೆ ಬಿಗ್ ರಿಲೀಫ್
Advertisement
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾರ್ಯಕರ್ತರು, ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದವರು ಬೇರೆಯವರಾಗಿದ್ದಾರೆ. ಅಮಾಯಕರನ್ನು ಬಂಧಿಸಿ ಬಂಧಿಸಿ ಕಳುಹಿಸಿದ್ದಾರೆ. ಮುಂದಿನ ತಿಂಗಳ 22 ರವರೆಗೆ ಸರ್ಕಾರಕ್ಕೆ ಗಡುವನ್ನು ನೀಡಿದ್ದು, ಈ ಡೆಡ್‌ಲೈನ್ ಬಳಿಕ ಮುಂದಿನ ಹೋರಾಟದ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.