ರೋಹಿತ್ ಚಕ್ರತೀರ್ಥ ಅಣಕು ಶವಯಾತ್ರೆ ನಡೆಸಿ ಕರವೇ ಪ್ರತಿಭಟನೆ

Public TV
1 Min Read
protest

ಬೆಳಗಾವಿ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಮರುಪರಿಷ್ಕರಣಾ ಸಮಿತಿಯನ್ನು ವಜಾ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದ ಡಿಸಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು.

WhatsApp Image 2022 05 31 at 3.15.03 PM 1

ಈ ವೇಳೆ ನಗರದ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ರೋಹಿತ್ ಚಕ್ರತೀರ್ಥ ಅಣಕು ಶವಯಾತ್ರೆ ಮಾಡಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಈ ವೇಳೆ ಸರ್ಕಾರದ ವಿರುದ್ಧ ಕನ್ನಡಪರ ಹೋರಾಟಗಾರರು ಧಿಕ್ಕಾರ ಕೂಗಿದರು. ಡಿಸಿ ಕಚೇರಿ ಆವರಣದ ಮುಂಭಾಗದಲ್ಲಿ ರೋಹಿತ್ ಚಕ್ರತೀರ್ಥ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್ 

WhatsApp Image 2022 05 31 at 3.15.02 PM

ಈ ಕುರಿತು ಮಾತನಾಡಿದ ಕನ್ನಡ ಸಂಘಟನೆ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ, ಹಿಂದಿನ ವರ್ಷದ ಪಠ್ಯವನ್ನೇ ಮಕ್ಕಳಿಗೆ ವಿತರಿಸಬೇಕು. ಪ್ರೋ.ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಸಿದ್ಧಪಡಿಸಿದ್ದ ಪಠ್ಯಪುಸ್ತಕ ತರಾತುರಿಯಲ್ಲಿ ಮರು ಪರಿಷ್ಕರಣೆ ಮಾಡಲಾಗುತ್ತಿದೆ. ಭಾಷಾ ಪಠ್ಯ ಮತ್ತು ಸಮಾಜ ವಿಜ್ಞಾನ ಪಠ್ಯಗಳಲ್ಲಿ ಖಂಡನಾರ್ಹ ಬದಲಾವಣೆ ಮಾಡಿರುವ ಆರೋಪ ಕೇಳಿಬಂದಿದೆ ಎಂದರು. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್

ಮರು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲು ಸರ್ಕಾರ ಹೊರಟಿದೆ. ಇದರಿಂದ ಲಕ್ಷಾಂತರ ಮಕ್ಕಳ ಭವಿಷ್ಯ, ಶಿಕ್ಷಣ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಸರ್ಕಾರ ಮೊಂಡುತನಕ್ಕೆ ಬಿದ್ದರೆ ತಕ್ಕ ಪಾಠ ಕಲಿಸುತ್ತೇವೆ. ಶಿಕ್ಷಣ ವ್ಯವಸ್ಥೆಯಲ್ಲಿ ರಾಜಕೀಯ ಮಾಡದೇ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪರಿಷ್ಕರಣಾ ಸಮಿತಿ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

Share This Article
Leave a Comment

Leave a Reply

Your email address will not be published. Required fields are marked *