ಬೆಳಗಾವಿ: ನಗರದ ಮಹಾಂತೇಶ್ ನಗರದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರ (Maharashtra) ಪಾಸಿಂಗ್ ಹೊಂದಿದ ಗೂಡ್ಸ್ ವಾಹನದ ಮೇಲೆ ಏಕಾಏಕಿ ಕರವೇ ಕಾರ್ಯಕರ್ತರು (Karave Protest) ದಾಳಿ ನಡೆಸಿ ವಾಹನದ ಗಾಜು ಒಡೆಯಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆಯಿತು.
ಮಹಾರಾಷ್ಟ್ರದಲ್ಲಿ ಕರ್ನಾಟಕದ (Karnataka) ಬಸ್‍ಗಳ (Bus) ಮೇಲೆ ಕಲ್ಲು ತೂರಾಟ ಹಿನ್ನೆಲೆ ಬೆಳಗಾವಿಯಲ್ಲಿ (Belagavi) ಕರವೇ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹಾಗೂ ಡಿಸಿಎಂ ದೇವೇಂದ್ರ ಫಡ್ನವಿಸ್ ಪ್ರತಿಕೃತಿ ದಹನ ಮಾಡಿದರು. ಮುಂಜಾಗ್ರತಾ ಕ್ರಮವಾಗಿ ಡಿಸಿಪಿ ರವೀಂದ್ರ ಗಡಾದಿ, ಮಾರ್ಕೆಟ್ ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಪ್ರತಿಭಟನಾ ಸ್ಥಳದಲ್ಲೇ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. ಈ ವೇಳೆ ಮಹಾರಾಷ್ಟ್ರ ಸರ್ಕಾರ ಹಾಗೂ ಸಿಎಂ ಏಕನಾಥ್ ಶಿಂಧೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೈಸೂರು, ಬೆಂಗ್ಳೂರಿನಲ್ಲಿ ಕೊರಗಜ್ಜ ದೈವದ ಹೆಸರಲ್ಲಿ ದಂಧೆ – ಆರೋಪ
ಪ್ರತಿಭಟನೆ ಮಾಡುತ್ತಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳದಲ್ಲೇ ಮಹಾರಾಷ್ಟ್ರ ಪಾಸಿಂಗ್ ಇದ್ದ ವಾಹನಕ್ಕೆ ಕಪ್ಪು ಮಸಿ ಬಳಿದು ವೈಪರ್ ಮುರಿದು ಆಕ್ರೋಶ ವ್ಯಕ್ತಪಡಿಸಿದರು. ಗೂಡ್ಸ್ ವಾಹನದ ಮುಂಭಾಗದ ಗಾಜು ಒಡೆಯಲು ಕರವೇ ಕಾರ್ಯಕರ್ತರ ಯತ್ನಿಸಿದರು. ಬಳಿಕ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಿದರು. ಇದನ್ನೂ ಓದಿ: ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ – ಮಹಾರಾಷ್ಟ್ರದ 42 ಗ್ರಾಮಗಳ ಒಕ್ಕೊರಲಿನ ಮನವಿ