ಕಾರವಾರ: ಚಿನ್ನದ ಉಂಗುರ ಹಾಗೂ ಬೆಳ್ಳಿ ಆಭರಣಗಳನ್ನು ಗಣಪತಿಯೊಂದಿಗೆ ಕೆರೆಯಲ್ಲಿ ವಿಸರ್ಜಿಸಿ, ಪೇಚಿಗೆ ಸಿಲುಕಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮಳಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋನರಹಳ್ಳಿಯಲ್ಲಿ ನಡೆದಿದೆ.
ಇಂದು ವಿದ್ಯುಕ್ತವಾಗಿ ಗಣಪತಿಗೆ ಪೂಜೆ ಸಲ್ಲಿಸಿ ಸಮೀಪದ ಕೆರೆಗೆ ತಂದ ಗೊನೆಹಳ್ಳಿ ಗ್ರಾಮಸ್ಥರು, ದೇವರಿಗೆ ಹಾಕಿದ್ದ ಉಂಗುರ, ಬೆಳ್ಳಿ ಸರಪಳಿಯನ್ನು ತೆಗೆಯುವುದನ್ನು ಮರೆತಿದ್ದರು. ಈ ವೇಳೆ ಗಣಪತಿಯನ್ನು ಕೆರೆಯ ನಡುಭಾಗದಲ್ಲಿ ವಿಸರ್ಜಿಸಲಾಗಿತ್ತು. ನಂತರ ಮರಳಿ ಬಂದಾಗ ಗಣೇಶನಿಗೆ ಹಾಕಿದ್ದ ಆಭರಣಗಳು ಕಾಣದಾದಾಗ ತಾವು ಮಾಡಿದ ತಪ್ಪು ಅರಿವಾಗಿದೆ. ಇದನ್ನೂ ಓದಿ: ಗಣೇಶ ಹಬ್ಬದ ಸಂಭ್ರಮದಲ್ಲಿ ಕುಚುಕು ಗೆಳೆಯರು
ಕೆಲವರು ನೀರಿನಲ್ಲಿ ಮುಳಗಿ ಹುಡುಕುವ ಪ್ರಯತ್ನ ಮಾಡಿದರೂ ಕೈ ಚಲ್ಲಿ ಕೂರುವಂತಾಯಿತು. ನಂತರ ದೇವರಭಾವಿ ಗ್ರಾಮದ ಯುವಕ ವಿನಯ್ ನಾಯಕ್ ಎಂಬುವವರು ಸ್ಕೂಬಾ ಡೈ ಗೆ ಬಳಸುವ ಪರಿಕರ ಬಳಸಿ ನೀರಿನಲ್ಲಿ ಮುಳಗಿ ಕೊನೆಗೂ ಗಣಪತಿಯೊಂದಿಗೆ ವಿಸರ್ಜಿಸಿದ ಆಭರಣಗಳನ್ನು ತೆಗೆದುಕೊಟ್ಟಿದ್ದಾರೆ. ಇದನ್ನೂ ಓದಿ:ನಿಧಿ ಆಸೆಗೆ ಕಿಡಿಗೇಡಿಗಳಿಂದ ಪ್ರಾಚೀನ ಶಿವನ ದೇವಾಲಯ ಧ್ವಂಸ