ನವದೆಹಲಿ: ಎಬಿವಿಪಿ ವಿರುದ್ಧ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಾಚಾರ ಬೆದರಿಕೆ ಬಂದಿದೆ ಎಂದು ಕಾರ್ಗಿಲ್ ಹುತಾತ್ಮ ಯೋಧರೊಬ್ಬರ ಮಗಳು ಹೇಳಿದ್ದಾರೆ
1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಮಂದೀಪ್ ಸಿಂಗ್ ಅವರ ಪುತ್ರಿ ಗುರ್‍ಮೆಹರ್ ಕೌರ್ ಈ ಬಗ್ಗೆ ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದು, ಎಬಿವಿಪಿ ವಿರುದ್ಧ ಪೋಸ್ಟ್ ಹಾಕಿದ ನಂತರ ಅತ್ಯಾಚಾರದ ಬೆದರಿಕೆಗಳು ಬಂದಿದೆ ಎಂದು ಹೇಳಿದ್ದಾರೆ.
Advertisement
ಕಳೆದ ಬುಧವಾರ ದೆಹಲಿಯ ರಾಮ್‍ಜಸ್ ಕಾಲೇಜಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘ(ಎಐಎಸ್‍ಎ) ಹಾಗೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಜೆಎನ್‍ಯು ವಿದ್ಯಾರ್ಥಿಗಳಾದ ಉಮರ್ ಖಲೀದ್ ಹಾಗೂ ಶೆಹ್ಲಾ ರಷೀದ್‍ರನ್ನು ಕಲ್ಚರ್ ಆಫ್ ಪ್ರೊಟೆಸ್ಟ್ಸ್ ಎಂಬ ಸೆಮಿನಾರ್ ನೀಡಲು ಆಹ್ವಾಸಲಾಗಿತ್ತು. ಇದಕ್ಕೆ ಅಬಿವಿಪಿ ವಿರೋಧ ವ್ಯಕ್ತಪಡಿಸಿದ್ದೇ ಈ ಗಲಾಟೆಗೆ ಕಾರಣವಾಗಿದೆ.
Advertisement
Advertisement
ಇದಾದ ಬಳಿಕ ಗುರ್‍ಮೆಹರ್ ಕೌರ್, ನಾನು ಎಬಿವಿಪಿಗೆ ಹೆದರುವುದಿಲ್ಲ. ನಾನು ಒಂಟಿಯಲ್ಲ, ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಯೂ ನನ್ನ ಜೊತೆಗಿದ್ದಾರೆ ಎಂಬ ಭಿತ್ತಿಪತ್ರ ಹಿಡಿದಿರುವ ಫೋಟೋವನ್ನ ಫೇಸ್‍ಬುಕ್ ಪ್ರೊಫೈಲ್ ಪಿಕ್ಚರ್ ಮಾಡಿದ್ದರು. ನಂತರ ಈ ಫೋಟೋ ವೈರಲ್ ಆಗಿತ್ತು. ಗುರ್‍ಮೆಹರ್ ಅವರ ಈ ಫೋಟೋಗೆ ನಾಲ್ಕು ದಿನಗಳಲ್ಲಿ 2 ಸಾವಿರಕ್ಕೂ ಹೆಚ್ಚು ರಿಯಾಕ್ಷನ್ಸ್ ಹಾಗೂ 1 ಸಾವಿರಕ್ಕೂ ಹೆಚ್ಚು ಕಮೆಂಟ್ಸ್ ಬಂದಿದ್ದು, 3 ಸಾವಿರಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ.