ಉಡುಪಿ: ಕಾರ್ಕಳ ಅತ್ಯಾಚಾರ (Karkala Rape) ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಉಡುಪಿ (Udupi) ಎಸ್‌ಪಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ.
ವಿಡಿಯೋದಲ್ಲಿ ಹೇಳಿಕೆ ಬಿಡುಗಡೆ ಮಾಡಿದ ಅವರು, ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರಗೈದ ದೂರು ಬಂದಿದೆ ಎಂದು ತಿಳಿಸಿದ್ದಾರೆ.
ಎಸ್‌ಪಿ ಹೇಳಿದ್ದೇನು?
ಸಂತ್ರಸ್ತೆ ಮತ್ತು ಆರೋಪಿ ಮೂರು ತಿಂಗಳಿಂದ ಇನ್‌ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಕಾರಿನಲ್ಲಿ ಅಪಹರಿಸಿದ್ದಾನೆ. ಇದನ್ನೂ ಓದಿ: Karkala | ಮದ್ಯದಲ್ಲಿ ಮಾದಕ ವಸ್ತು ನೀಡಿ ಅತ್ಯಾಚಾರ – ಗ್ಯಾಂಗ್‌ರೇಪ್ ಶಂಕೆ?
ಈ ನಡುವೆ ಮದ್ಯಪಾನದಲ್ಲಿ ಏನೋ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸವೇರಾ ರಿಚರ್ಡ್ ಕ್ವಾಡ್ರಸ್ ಎಂಬಾತನನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ.
ಸಂತ್ರಸ್ತೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಹಿಂದೂ ಸಂಘಟನೆಗಳು ಇದು ಕೇವಲ ಅತ್ಯಾಚಾರ ಪ್ರಕರಣವಲ್ಲ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆದಿದೆ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ.