Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಸಾರಥ್ಯದಲ್ಲಿ ಮೂಡಿಬಂದ ‘ಕರ್ಕಿ’: ಜೆಪಿ ನಾಯಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಸಾರಥ್ಯದಲ್ಲಿ ಮೂಡಿಬಂದ ‘ಕರ್ಕಿ’: ಜೆಪಿ ನಾಯಕ

Cinema

ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಸಾರಥ್ಯದಲ್ಲಿ ಮೂಡಿಬಂದ ‘ಕರ್ಕಿ’: ಜೆಪಿ ನಾಯಕ

Public TV
Last updated: August 25, 2024 2:07 pm
Public TV
Share
3 Min Read
FotoJet 62
SHARE

ಈಗಾಗಲೇ ತನ್ನ ಟೈಟಲ್ ಮತ್ತು ಫಸ್ಟ್ ಲುಕ್ ಮೂಲಕ ಸಿನಿಮಂದಿಯ ಗಮನ ಸೆಳೆದಿರುವ ‘ಕರ್ಕಿ’ ಸಿನೆಮಾ ತೆರೆಗೆ ಬರಲು ಭರದ ಸಿದ್ದತೆ ನಡೆಸುತ್ತಿದೆ. ಸದ್ಯ ನಿಧಾನವಾಗಿ ‘ಕರ್ಕಿ’ ಸಿನೆಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ಮೊದಲ ಹಂತದಲ್ಲಿ ಸಿನೆಮಾದ ಟೀಸರ್ ಮತ್ತು ಟ್ರೇಲರ್ ಅನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ‘ಕರ್ಕಿ’ (Karkee) ಸಿನೆಮಾದ ಟೀಸರ್ (Teaser) ಮತ್ತು ಟ್ರೇಲರ್ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಈ ವೇಳೆ ‘ಕರ್ಕಿ’ ಸಿನೆಮಾದ ಕಲಾವಿದರು, ತಂತ್ರಜ್ಞರು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಹಾಜರಿದ್ದರು.

FotoJet 1 22

ಮೊದಲಿಗೆ ‘ಕರ್ಕಿ’ ಸಿನೆಮಾದ ಹಾಡುಗಳಿಗೆ ಸಾಹಿತ್ಯ ರಚಿಸಿರುವ ಚಿತ್ರ ಸಾಹಿತಿ ಕವಿರಾಜ್ ಮಾತನಾಡಿ, ‘ತಮಿಳಿನ ಹಿರಿಯ ಮತ್ತು ಅನುಭವಿ ನಿರ್ದೇಶಕ ಪವಿತ್ರನ್ ‘ಕರ್ಕಿ’ ಸಿನೆಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಈ ಸಿನೆಮಾದಲ್ಲಿ ಆರು ಹಾಡುಗಳಿದ್ದು, ಎಲ್ಲಾ ಹಾಡುಗಳಿಗೆ ಸಾಹಿತ್ಯ ಬರೆಯಲು ಅವಕಾಶ ಸಿಕ್ಕಿದೆ. ಪವಿತ್ರನ್ ಅವರಂಥ ನಿರ್ದೇಶಕರ ಜೊತೆ ಕೆಲಸ ಮಾಡಲು ‘ಕರ್ಕಿ’ ಸಿನೆಮಾದಲ್ಲಿ ಅವಕಾಶ ಸಿಕ್ಕಿದ್ದು, ನನಗೂ ಹೊಸ ಅನುಭವ ನೀಡಿದೆ. ಪ್ರತಿ ಹಾಡಿನ ಒಂದೊಂದು ಪದವನ್ನೂ ಅವರೂ ಅರ್ಥೈಸಿಕೊಂಡು, ಸ್ಪಂದಿಸುತ್ತಿದ್ದರು. ನಮ್ಮ ನಡುವಿನ ಕಥೆಯೊಂದು ಹೊಸ ರೀತಿಯಲ್ಲಿ ಮೂಡಿಬಂದಿದ್ದು, ‘ಕರ್ಕಿ’ ನೋಡುಗರಿಗೆ ಹೊಸ ಅನುಭವ ಕೊಡಲಿದೆ’ ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.

FotoJet 2 12

ಈಗಾಗಲೇ ಸುಮಾರು 20ಕ್ಕೂ ಹೆಚ್ಚು ಸಿನೆಮಾಗಳನ್ನು ವಿತರಿಸಿರುವ ವಿತರಕ ಮತ್ತು ಉದ್ಯಮಿ ಪ್ರಕಾಶ್ ಪಳನಿ ‘ಕರ್ಕಿ’ ಸಿನೆಮಾಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ತಮ್ಮ ಚೊಚ್ಚಲ ನಿರ್ಮಾಣದ ಸಿನೆಮಾದ ಬಗ್ಗೆ ಮಾತನಾಡಿದ ಪ್ರಕಾಶ್ ಪಳನಿ, ‘ಸಿನೆಮಾದ ಕಥೆ ಇಷ್ಟವಾಗಿ ಈ ಸಿನೆಮಾವನ್ನು ನಿರ್ಮಿಸಲು ಮುಂದಾದೆ.  ಮೊದಲು ಈ ಸಿನೆಮಾವನ್ನು ಕನ್ನಡದ ದೊಡ್ಡ ನಿರ್ದೇಶಕರೊಬ್ಬರು ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅವರು ನಿರ್ದೇಶನ ಮಾಡಲಾಗಲಿಲ್ಲ. ಅವರ ಬದಲಾಗಿ ತಮಿಳು ನಿರ್ದೇಶಕ ಪವಿತ್ರನ್ ಈ ಸಿನೆಮಾವನ್ನು ನಿರ್ದೇಶಿಸಿದರು. ಅವರ ಅನುಭದಲ್ಲಿ ‘ಕರ್ಕಿ’ ಸಿನೆಮಾ ತುಂಬ ಚೆನ್ನಾಗಿ ಮೂಡಿಬಂದಿದೆ. ಈಗಾಗಲೇ ಸಿನೆಮಾದ ಎಲ್ಲಾ ಕೆಲಸಗಳು ಮುಗಿದಿದ್ದು, ಇದೇ ಸೆಪ್ಟೆಂಬರ್ ಅಂತ್ಯದೊಳಗೆ ಸಿನೆಮಾವನ್ನು ಬಿಡುಗಡೆ ಮಾಡುವ ಯೋಚನೆಯಿದೆ. ಪ್ರೇಕ್ಷಕರಿಗೂ ‘ಕರ್ಕಿ’ ಸಿನೆಮಾ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

FotoJet 3 10

ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ, ಈಗಾಗಲೇ ‘ವಾಟ್ಸಾಪ್ ಲವ್’, ‘ರಾಜರಾಣಿ’ ಸೇರಿದಂತೆ ಕೆಲ ಸಿನೆಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದ ಜಯಪ್ರಕಾಶ್ (Jayaprakash) (ಜೆ.ಪಿ) ರೆಡ್ಡಿ ‘ಕರ್ಕಿ’ ಸಿನೆಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನೆಮಾದಲ್ಲಿ ಕಾನೂನು ಪದವಿಧರನಾಗಬೇಕು ಎಂಬ ಕನಸು ಇಟ್ಟುಕೊಂಡ ಹಳ್ಳಿ ಹುಡುಗನ ಪಾತ್ರದಲ್ಲಿ ಜೆ. ಪಿ ಅಭಿನಯಿಸಿದ್ದಾರೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ನಾಯಕ ಜಯಪ್ರಕಾಶ್ (ಜೆ.ಪಿ) ರೆಡ್ಡಿ, ‘ಈ ಸಿನೆಮಾದಲ್ಲಿ ನನ್ನದು ಮುತ್ತುರಾಜ್ ಎಂಬ ಹಳ್ಳಿ ಹುಡುಗನ ಪಾತ್ರ. ಜಾತಿ ಮತ್ತು ಜನಾಂಗೀಯ ವಿಷಯವನ್ನು ಮನ ಮುಟ್ಟುವಂತೆ ಈ ಸಿನೆಮಾದಲ್ಲಿ ಹೇಳಲಾಗಿದೆ. ಸ್ನೇಹ, ಪ್ರೀತಿ, ಪ್ರೇಮ ಮತ್ತು ಮಾನವೀಯತೆಯ ಅಂಶಗಳ ಸುತ್ತ ಈ ಸಿನೆಮಾ ಸಾಗುತ್ತದೆ. ಆದಷ್ಟು ನೈಜವಾಗಿ ಸಿನೆಮಾದ ಕಥೆ, ಪಾತ್ರಗಳು ಮೂಡಿಬಂದಿದೆ. ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವಂತೆ ‘ಕರ್ಕಿ’ ಸಿನೆಮಾ ಮೂಡಿಬಂದಿದೆ’ ಎಂದರು

FotoJet 4 6

‘ಕರ್ಕಿ’ ಸಿನೆಮಾದಲ್ಲಿ ನಾಯಕ ನಟ ಜಯಪ್ರಕಾಶ್ (ಜೆ. ಪಿ) ರೆಡ್ಡಿ ಅವರಿಗೆ ಮಲೆಯಾಳಿ ಬೆಡಗಿ ಮೀನಾಕ್ಷಿ ನಾಯಕಿಯಾಗಿ ಜೋಡಿಯಾಗಿದ್ದಾರೆ. ಉಳಿದಂತೆ ಸಾಧುಕೋಕಿಲ, ಬಲರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ, ಸ್ವಾತಿ, ಸವಿತಾ ಮೊದಲಾದವರು ‘ಕರ್ಕಿ’ ಸಿನೆಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ‘ಥರ್ಡ್ ಐ ಮೀಡಿಯಾ’ ಬ್ಯಾನರಿನಲ್ಲಿ ಪ್ರಕಾಶ್ ಪಳನಿ ನಿರ್ಮಿಸಿರುವ ‘ಕರ್ಕಿ’ ಸಿನೆಮಾಕ್ಕೆ ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಕರ್ಕಿ’ ಸಿನೆಮಾಕ್ಕೆ ಹೃಷಿಕೇಶ ಛಾಯಾಗ್ರಹಣ, ಶ್ರೀ ಕ್ರೇಜಿಮೈಂಡ್ಸ್ ಸಂಕಲನವಿದೆ. ‘ಕರ್ಕಿ’ ಸಿನೆಮಾದ ಆರು ಹಾಡುಗಳಿಗೆ ಕವಿರಾಜ್ ಸಾಹಿತ್ಯವಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.

ಶಿವಮೊಗ್ಗ, ದಾವಣಗೆರೆ, ಬಂಗಾರಪೇಟೆ, ಕೋಲಾರ, ಬಾಗಲಕೋಟೆ ಸುತ್ತಮುತ್ತ ‘ಕರ್ಕಿ’ ಸಿನೆಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಸದ್ಯ ‘ಕರ್ಕಿ’ ಸಿನೆಮಾದ ಟೀಸರ್ ಮತ್ತು ಟ್ರೇಲರ್ ಸೋಶಿಯಲ್ ಮೀಡಿಯಾಗಳಲ್ಲಿ ಒಂದಷ್ಟು ಸದ್ದು ಮಾಡುತ್ತಿದ್ದು, ‘ಕರ್ಕಿ’ಯ ಕಮಾಲ್ ಥಿಯೇಟರಿನಲ್ಲಿ ಹೇಗೆ ನಡೆಯಲಿದೆ ಎಂಬುದು ಸಿನೆಮಾ ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ.

TAGGED:JayaprakashKarkeePavitranteaserಕರ್ಕಿಜಯಪ್ರಕಾಶ್ಟೀಸರ್ಪವಿತ್ರನ್‍
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bengaluru Nayandhalli
Bengaluru City

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

Public TV
By Public TV
9 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
1 hour ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
1 hour ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
1 hour ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
2 hours ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?