ಮಂಗಳೂರು: ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಜರಂಗಬಲಿ ಕೀ ಜೈ (Jai Bajrangbali) ಎಂದು ಆರಂಭದಲ್ಲಿ ಹೇಳಿ ಭಾಷಣ ಮಾಡಿದ್ದು ವಿಶೇಷವಾಗಿತ್ತು.
ಪ್ರತಿ ಚುನಾವಣಾ ಭಾಷಣದಲ್ಲಿ ಮೋದಿ ಆರಂಭದಲ್ಲಿ ಭಾರತ್ ಮಾತಾ ಕೀ ಜೈ ಎಂದು ಹೇಳಿ ಭಾಷಣ ಮಾಡುತ್ತಿದ್ದಾರೆ. ಅದೇ ರೀತಿ ಇಂದು ಮೂಲ್ಕಿ ಪ್ರಚಾರ ಸಭೆಯಲ್ಲಿ ಭಾರತ್ ಮಾತಾಕೀ ಜೈ ಎಂದು ಹೇಳಿದ ಬಳಿಕ ತುಳುವಿನಲ್ಲಿ ಮಾತನ್ನು ಆರಂಭಿಸಿದರು. ಪರಶುರಾಮ ಕ್ಷೇತ್ರದ ಎನ್ನ ಮೋಕೆದ ತುಳುವಪ್ಪೆ ಜೋಕುಲೇಗ್ ಸೊಲ್ಮೆಲು (ಪರಶುರಾಮ ಕ್ಷೇತ್ರದ ತಾಯಿಯ ಪ್ರೀತಿಯ ಮಕ್ಕಳಿಗೆ ನಮಸ್ಕಾರಗಳು) ಎಂದು ಹೇಳಿ ಭಾಷಣ ಆರಂಭಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ಠಕ್ಕರ್ – ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ
Advertisement
Advertisement
ಮೋದಿ ಅವರ ಹಿಂದಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರ ಮಾಡಲು ದಕ್ಷಿಣ ಕನ್ನಡ ಬಿಜೆಪಿ ಮುಂದಾಗಿತ್ತು. ಆದರೆ ನೆರೆದಿದ್ದ ಸಭಿಕರು ಕನ್ನಡ ಭಾಷಾಂತರ ಬೇಡ ಎಂದು ಹೇಳಿದರು. ಇದಕ್ಕೆ ಸಂತಸ ವ್ಯಕ್ತಪಡಿಸಿದ ಮೋದಿ ಹಿಂದಿಯಲ್ಲಿ ಭಾಷಣ ಮುಂದುವರಿಸಿದರು. ಆರಂಭದಲ್ಲಿ ಪರುಶುರಾಮ ಕ್ಷೇತ್ರ, ಮೂಲ್ಕಿ ವೆಂಕಟರಣ ದೇವಸ್ಥಾನ, ನಾರಾಯಣ ಗುರು, ತೀರ್ಥಂಕರನ್ನು ಉಲ್ಲೇಖಿಸಿ ಭಾಷಣ ಮುಂದುವರಿಸಿದರು.
Advertisement
Advertisement
ಈ ಹಿಂದೆ ಮೋದಿ ಮಂಗಳೂರಿಗೆ ಬಂದಾಗಲೂ ಕನ್ನಡ ಭಾಷಾಂತರಕ್ಕೆ ಬಿಜೆಪಿ ಮುಂದಾಗಿತ್ತು. ಆ ಸಂದರ್ಭದಲ್ಲೂ ಅಲ್ಲಿ ನೆರೆದಿದ್ದ ಬಿಜೆಪಿ ಬೆಂಬಲಿಗರು ಕನ್ನಡ ಭಾಷಾಂತರ ಬೇಡ ಎಂದು ಹೇಳಿದ್ದರು.
ಭಾಷಣದ ಕೊನೆಯಲ್ಲಿ ಎಲ್ಲರ ಜೊತೆ ಫ್ಲ್ಯಾಶ್ ಲೈಟ್ ಆನ್ ಮಾಡಲು ಹೇಳಿದ ಮೋದಿ ಪ್ರತಿ ಮನೆ ಮನೆಗೆ ಹೋಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಬೇಕು. ಈ ಮೂಲಕ ಮೋದಿಗೆ ಅಶೀರ್ವಾದ ಮಾಡಬೇಕೆಂದು ಎಂದು ಸಭಿಕರಲ್ಲಿ ಮನವಿ ಮಾಡಿಕೊಂಡರು. ಇದನ್ನೂ ಓದಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಸೇರಿದ್ದು ಹೇಗೆ? – ಇನ್‌ಸೈಡ್ ಸ್ಟೋರಿ
ಕೊನೆಗೂ ಜೈ ಬಜರಂಗ ಬಲಿ ಘೋಷಣೆ ಬಳಿಕ ವಂದೇ ಮಾತರಂ ಘೋಷಣೆ ಕೂಗಿ ಮೋದಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.
ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು (Bajrang Dal) ನಿಷೇಧಿಸುವ ಪ್ರಸ್ತಾಪವನ್ನು ಉಲ್ಲೇಖಿಸಿದೆ. ಬಜರಂಗದಳ ನಿಷೇಧ ಪ್ರಸ್ತಾಪ ವಿಷಯವನ್ನು ಬಿಜೆಪಿ ಈಗ ಚುನಾವಣಾ (Election) ಅಸ್ತ್ರವನ್ನಾಗಿ ಬಳಕೆ ಮಾಡುತ್ತಿದೆ. ಮಂಗಳವಾರದಿಂದ ಬಿಜೆಪಿಯ ರೋಡ್ ಶೋ ಮತ್ತು ಸಮಾವೇಶದಲ್ಲಿ ಭಾರತ್ ಮಾತಾ ಕೀ ಜೈ ಘೋಷಣೆಯೊಂದಿಗೆ ಜೈ ಬಜರಂಗ ಬಲಿ ಘೋಷಣೆ ಮೊಳಗಲು ಆರಂಭಿಸಿದೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಏನಿದೆ?
ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ.
ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗ ಬಜರಂಗದಳ ಮತ್ತು ಪಿಎಫ್‌ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.