ಚಿಕ್ಕಬಳ್ಳಾಪುರ: ಮೆಕ್ಕಾ ಪ್ರವಾಸದಿಂದ ಹಿಂದಿರುಗಿದ್ದ ಗೌರಿಬಿದನೂರಿನ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ #Covid19 ಸೋಂಕು ದೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಸಚಿವರು ತಿಳಿಸಿದ್ದಾರೆ.
Advertisement
ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ #Covid19 ಸೋಂಕು ದೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ.
— B Sriramulu (@sriramulubjp) March 21, 2020
Advertisement
ಶುಕ್ರವಾರದ ವರದಿ ಪ್ರಕಾರ, ಭಾರತದಲ್ಲಿ ಸೋಂಕಿತರ ಸಂಖ್ಯೆ 249ಕ್ಕೆ ಏರಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಇತ್ತ ಕೇರಳದ ಕಾಸರಗೋಡಿನಲ್ಲಿ 5 ಹೊಸ ಸೋಂಕು ಶಂಕಿತ ಪ್ರಕರಣ ವರದಿಯಾಗಿದ್ದರೆ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಸೋಂಕಿತರ ಸಂಖ್ಯೆ 5 ಪಟ್ಟು ಹೆಚ್ಚಳವಾಗಿದೆ.
Advertisement
ನಮ್ಮ ಸರ್ಕಾರವು ಮುಂಜಾಗ್ರತಾ ಕ್ರಮವಾಗಿ, ಸರ್ಕಾರಿ ಕಛೇರಿಗಳು ಹಾಗೂ ಮುಖ್ಯ ಸ್ಥಳಗಳಲ್ಲಿ ಥರ್ಮಲ್ ಟೆಸ್ಟ್ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ ಚಿಂತನೆ ನಡೆಸುತ್ತಿದೆ.
— B Sriramulu (@sriramulubjp) March 21, 2020
Advertisement
ಒಟ್ಟು 185 ರಾಷ್ಟ್ರ ಹಾಗೂ ಪ್ರಾಂತ್ಯಗಳ ಮೇಲೆ ತನ್ನ ಕರಿನೆರಳು ಬೀರುತ್ತಿರುವ ಕೊರೊನಾ ವೈರಸ್‍ಗೆ ಈವರೆಗೆ ಸುಮಾರು 2,75,953 ಮಂದಿಗೆ ಸೋಂಕು ತಗುಲಿದೆ. ಅಲ್ಲದೇ ವಿಶ್ವದೆಲ್ಲೆಡೆ ಒಟ್ಟು 11,399 ಮಂದಿ ಕೊರೊನಾ ಸೋಂಕು ತಗುಲಿ ಜೀವ ಕಳೆದುಕೊಂಡಿದ್ದಾರೆ. ಸುಮಾರು 91,912 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಪ್ರಸ್ತುತ 1,72,642 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಡೆಡ್ಲಿ ಕೊರೊನಾಗೆ ಭಾರತದಲ್ಲಿ 249 ಮಂದಿ ತುತ್ತಾಗಿದ್ದು, 23 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 221 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ. ಈಗಾಗಲೇ ಕೊರೊನಾಗೆ 5 ಮಂದಿ ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಕೊರೊನಾ ಹಬ್ಬಿದ್ದು ಹೇಗೆ?
ಭಾರತದಲ್ಲಿ ಇದುವರೆಗೆ ಸೋಂಕಿತ ಪ್ರಕರಣ 246 (ಅಧಿಕೃತ ಪಟ್ಟಿ, ನಿನ್ನೆ ರಾತ್ರಿ 12 ಗಂಟೆಯವರೆಗೆ) ವರದಿಯಾಗಿದೆ. ಇದರಲ್ಲಿ ವಿದೇಶದಿಂದ ಬಂದ 136 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ವಿದೇಶದಿಂದ ಬಂದವರ ಜೊತೆ ಸಂಪರ್ಕದಿಂದ 105 ಮಂದಿಗೆ ಸೋಂಕು ತಗುಲಿದೆ.
ಜನವರಿ 30 ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿತ ಮೊದಲ ಕೇಸ್ ವರದಿಯಾಗಿತ್ತು. ಆದರೆ ಮಾರ್ಚ್ 10ರಂದು ದೇಶದಲ್ಲಿ ಸೋಂಕಿತರ ಸಂಖ್ಯೆ 50ಕ್ಕೆ ಮುಟ್ಟಿತ್ತು. ಸದ್ಯ ಮಾರ್ಚ್ 20ರವರೆಗೆ ಸೋಂಕಿತರ ಸಂಖ್ಯೆ 249ಕ್ಕೆ ತಲುಪಿದೆ.