ಬೆಂಗಳೂರು: ಇದೇ ಜೂನ್ 9 ರಿಂದ 20ರ ವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟಗೊಂಡಿದ್ದು, 22,446 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ-3 ಅನ್ನು ಜೂನ್ 9ರಿಂದ 20ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದರಿಂದ ಶಿಕ್ಷಣ ಇಲಾಖೆ ಇಂದೇ ಫಲಿತಾಂಶ ಪ್ರಕಟಿಸಿದೆ. 20.22% ಫಲಿತಾಂಶ ದಾಖಲಾಗಿದೆ. ಇದನ್ನೂ ಓದಿ: ಜು.1 ರಿಂದ ಹೊಸೂರು ರಸ್ತೆಯ ಟೋಲ್ ದರ ಏರಿಕೆ – ಯಾವ ವಾಹನಕ್ಕೆ ಎಷ್ಟು ಹೆಚ್ಚಳ?
ಒಟ್ಟು 1,11,002 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 22,446 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 11,937 ವಿದ್ಯಾರ್ಥಿಗಳು ಫಲಿತಾಂಶ ಸುಧಾರಣೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಜು.2ರಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಇನ್ನೂ ಮೂರು ಪರೀಕ್ಷೆ ಸೇರಿ ಒಟ್ಟಾರೆ 79.81% ಫಲಿತಾಂಶ ಬಂದಿದೆ. ಮೂರು ಪರೀಕ್ಷೆಗಳಿಗೆ ಹಾಜರಾದ 7,09,968 ವಿದ್ಯಾರ್ಥಿಗಳ ಪೈಕಿ 5,66,636 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಹಾಸನ ಯುವಜನತೆಯಲ್ಲಿ ಹೃದಯಾಘಾತ – ತನಿಖೆಗೆ ವಿಶೇಷ ಸಮಿತಿ ರಚಿಸಿದ ಸರ್ಕಾರ