– ಕೆಎಸ್‌ಆರ್‌ಟಿಸಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ
ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಇಂದಿನಿಂದ (ಶುಕ್ರವಾರ) ಆರಂಭವಾಗಲಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
Advertisement
ಇಂದಿನಿಂದ ಮಾ.22 ರ ವರೆಗೆ ನಿತ್ಯ ಬೆಳಗ್ಗೆ 10:15 ರಿಂದ ಮಧ್ಯಾಹ್ನ 1:30 ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ಪರೀಕ್ಷಾ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲು ಕ್ರಮ ವಹಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 9:30 ರಿಂದ ಮಧ್ಯಾಹ್ನ 2 ರ ವರೆಗೆ ಜೆರಾಕ್ಸ್ ಅಂಗಡಿಗಳು ಬಂದ್ ಆಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಣ್ಣಿಗೆ ಖಾರದ ಪುಡಿ ಎರಚಿ ಸಂಸದ ಉಮೇಶ್ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ
Advertisement
Advertisement
ಈ ಬಾರಿ 6,98,624 ವಿದ್ಯಾರ್ಥಿಗಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.
Advertisement
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ವಿಶೇಷ ಆಫರ್ ಘೋಷಿಸಿದೆ. ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಮನೆಗೆ ಹಿಂದಿರುಗಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು. ಇದನ್ನೂ ಓದಿ: ಗಾಜಾ ನೆರವು ಕೇಂದ್ರದಲ್ಲಿ ಜನರ ಮೇಲೆ ಇಸ್ರೇಲ್ ಸೈನಿಕರ ಗುಂಡಿನ ದಾಳಿ – 104 ಮಂದಿ ಸಾವು