ಬೆಂಗಳೂರು : ಮೇ- ಜೂನ್ ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ (2nd PUC Supplementary Result) ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಫಲಿತಾಂಶ ಪ್ರಕಟಗೊಂಡಿದೆ. ಮುಖ್ಯ ಪರೀಕ್ಷೆಯಂತೆ ಪೂರಕ ಪರೀಕ್ಷೆಯಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ
ಇಲಾಖೆ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ. ಪೂರಕ ಪರೀಕ್ಷೆಯಲ್ಲಿ 1,57,756 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 50,478 ವಿದ್ಯಾರ್ಥಿಗಳು ಪಾಸ್ ಆಗಿದ್ದು, ರಾಜ್ಯದಲ್ಲಿ 32% ಫಲಿತಾಂಶ ದಾಖಲಾಗಿದೆ. ಪರೀಕ್ಷೆ ಬರೆದವರ ಪೈಕಿ 28,901 ಬಾಲಕರು (30.22%) ಹಾಗೂ 21,577 ಬಾಲಕಿಯರು (34.75%) ತೇರ್ಗಡೆಯಾಗಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢದ ಮಾವಿನ ಮೇಳದಲ್ಲಿ ವಿಶ್ವದ ದುಬಾರಿ ಮಾವಿನ ಪ್ರದರ್ಶನ- ಕೆ.ಜಿಗೆ 2.70 ಲಕ್ಷ ರೂ.
ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಜೂನ್ 26 ಕೊನೆ ದಿನವಾಗಿದೆ. ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಕೆಗೆ ಜೂನ್ 30 ಕೊನೆಯ ದಿನವಾಗಿದೆ.
ಪರೀಕ್ಷೆಯ ಫಲಿತಾಂಶದ ವೆಬ್‌ಸೈಟ್ ವೀಕ್ಷಿಸಲು ಕ್ಲಿಕ್ ಮಾಡಿ: Karnataka 2nd PUC supplementary result