Connect with us

Districts

ಮೇ 24 ರಿಂದ ಪಿಯುಸಿ, ಜೂನ್ 21 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಸುರೇಶ್ ಕುಮಾರ್

Published

on

ವಿಜಯಪುರ: ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಜೂನ್ 21 ರಿಂದ ಎಸ್‍ಎಸ್‍ಎಲ್‍ಸಿ ಮತ್ತು ಮೇ 24 ರಿಂದ ಪಿಯುಸಿ ಪರೀಕ್ಷೆ ನಡೆಸಲಾಗುವುದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷೆ ದಿನಾಂಕ ನಿಗದಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳು ಸುರಕ್ಷಾ ಕೇಂದ್ರಗಳಾಗಿರಲಿವೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಂಜಾಗ್ರತಾ ಕ್ರಮ ಕೈಗೊಂಡು ಪರೀಕ್ಷೆ ನಡೆಸಲಿದ್ದಾರೆ ಎಂದರು.

ಮಕ್ಕಳು ಸುರಕ್ಷಿತವಾಗಿ ಬಂದು ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

Click to comment

Leave a Reply

Your email address will not be published. Required fields are marked *