ಬೆಂಗಳೂರು: ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Pre-Matric Scholarship) ಸ್ಥಗಿತ ಮಾಡಿಲ್ಲ ಅಂತ ವಿವಾದಕ್ಕೆ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ (Shrinivas Poojari ) ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
Advertisement
1-8ನೇ ತರಗತಿ SC-ST ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತ ಮಾಡಿಲ್ಲ. ವಿದ್ಯಾರ್ಥಿ ವೇತನ ಸ್ಥಗಿತ ಮಾಡಿದ್ದಾರೆ ಎಂಬುದು ಸುಳ್ಳು ಅಂತ ಸ್ಪಷ್ಟಪಡಿಸಿದ್ದಾರೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಾರ್ಯಕ್ರಮ ರಾಜ್ಯ ಸರ್ಕಾರದ ಯೋಜನೆಯಾಗಿದೆ. ವಿದ್ಯಾರ್ಥಿ ವೇತನ ಯೋಜನೆ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಯೋಜನೆ ನಿಲ್ಲಿಸೋದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ತಿಂಗಳಿಗೊಮ್ಮೆ ಕರ್ನಾಟಕ ಭೇಟಿಗೆ ಪ್ಲಾನ್ – ಚುನಾವಣೆ ತಯಾರಿ ಆರಂಭಿಸಿದ ಬಿಜೆಪಿ
Advertisement
Advertisement
1-5ನೇ ತರಗತಿಗೆ ಬಾಲಕರಿಗೆ (Boys) 1 ಸಾವಿರ, ಬಾಲಕಿಯರಿಗೆ (Girls) 1,100 ರೂ. ನೀಡಲಾಗುತ್ತಿದೆ. 6-7ನೇ ತರಗತಿಯವರಿಗೆ ಬಾಲಕರಿಕೆ 1,150 ಮತ್ತು ಬಾಲಕಿಯರಿಗೆ 1,250 ರೂ. ನೀಡಲಾಗುತ್ತಿದೆ. 8ನೇ ತರಗತಿಯ ಬಾಲಕರಿಗೆ 1,250 ಮತ್ತು ಬಾಲಕಿಯರಿಗೆ 1,350 ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. 9 ಮತ್ತು 10ನೇ ತರಗತಿ ಮಕ್ಕಳಿಗೂ ವಿದ್ಯಾರ್ಥಿ ವೇತನ ಕೇಂದ್ರ ಹಾಗೂ ರಾಜ್ಯದ ನಡುವೆ 60:40 ಅನುಪಾತದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲಿದೆ: ಬೊಮ್ಮಾಯಿ