Bengaluru City

ರಾಜ್ಯದಲ್ಲಿ ಬೃಹತ್ ಲಸಿಕಾ ಮೇಳ ಯಶಸ್ವಿ: ಸಿಎಂ ಸಂತಸ

Published

on

Karnataka administered 29.5 Lakh covid vaccine doses in a single day CM Bommai Thanks Modi
Share this

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್ ಲಸಿಕಾ ಮೇಳ ಯಶಸ್ವಿಯಾಗಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಗುರಿ ಇಟ್ಟು ಕೊಳ್ಳಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಲಸಿಕಾ ಅಭಿಯಾನದ ಬಗ್ಗೆ ಮಾಹಿತಿ ನೀಡಲಾಗಿತ್ತು. 30 ಲಕ್ಷ ಡೋಸ್ ಪೈಕಿ 29 ಲಕ್ಷ ಡೋಸ್ ಲಸಿಕೆ ಹಾಕಲಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ನಿರಂತರ ಸಹಕಾರದಿಂದ ಸಾಧ್ಯವಾಯಿತು ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಲಸಿಕೆ ವಿತರಣೆ- ದೇಶದಲ್ಲಿ ಬೆಂಗಳೂರು ನಂಬರ್ 1

ಈ ಮಹತ್ವದ ಸಾಧನೆಯನ್ನು ಸಾಧಿಸಿದ ಆರೋಗ್ಯ ಸೇವಾ ಕಾರ್ಯಕರ್ತರ ಅಭಿನಂದಿಸಿರುವ ಮುಖ್ಯಮಂತ್ರಿಗಳು ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement
Advertisement