ನವದೆಹಲಿ: ಮಹಾರಾಷ್ಟ್ರ-ಕರ್ನಾಟಕ ಗಡಿ (Karnataka-Maharashtra Border Row) ವಿವಾದ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಎರಡು ರಾಜ್ಯಗಳ ನಡುವಿನ ಗಡಿ ವಿವಾದ ತೀವ್ರಗೊಂಡಿರುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಧ್ಯಪ್ರವೇಶ ಮಾಡಲು ನಿರ್ಧರಿಸಿದ್ದಾರೆ. ಇಂದು ಅಮಿತ್ ಶಾ ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲಿದ್ದಾರೆ.
ಇಂದು ಸಂಜೆ 7 ಗಂಟೆಗೆ ದೆಹಲಿಯಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಮುಖಾಮುಖಿಯಾಗಲಿದ್ದಾರೆ. ಇದನ್ನೂ ಓದಿ: ಭಾರತ, ಚೀನಾ ಸಂಘರ್ಷ – ಅರುಣಾಚಲ ಪ್ರದೇಶದ ಮೇಲೆ ಡ್ರ್ಯಾಗನ್ ಕಣ್ಣು ಹಾಕಿದ್ದು ಯಾಕೆ?
Advertisement
Advertisement
ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿರುವ ಹಿನ್ನೆಲೆ ಪ್ರದೇಶ ಅಥಾವ ಊರುಗಳ ಮರು ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅದಾಗ್ಯೂ ಗಡಿ ಸಮಸ್ಯೆಯಿಂದ ಎರಡು ರಾಜ್ಯಗಳಲ್ಲಿ ಶಾಂತಿ ಮತ್ತು ಭದ್ರತೆಗೆ ಧಕ್ಕೆಯಾಗುತ್ತಿದ್ದು, ಮುಖ್ಯವಾಗಿ ಈ ಬಗ್ಗೆ ಚರ್ಚೆಯಾಗಲಿದೆ.
Advertisement
Advertisement
ಗಲಭೆಗಳು ಹೆಚ್ಚುತ್ತಿರುವ ಹಿನ್ನೆಲೆ ಸ್ಥಳೀಯ ಸಂಘಟನೆಗಳನ್ನು ನಿಯಂತ್ರಿಸಲು ಹಾಗೂ ಎರಡು ರಾಜ್ಯಗಳಲ್ಲೂ ಶಾಂತಿ ಕಾಪಾಡಲು ಅಮಿತ್ ಶಾ ಕಠಿಣ ಎಚ್ಚರಿಗೆ ನೀಡಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ನಾನು ಈಗ ಬೆಳೆಯುತ್ತಿದ್ದರೆ ಊರು ಬಿಟ್ಟು ಅಮೆರಿಕಕ್ಕೆ ಎಂದೂ ಹೋಗುತ್ತಿರಲಿಲ್ಲ: ಅಡೋಬ್ ಸಿಇಒ