ಬೆಂಗಳೂರು: ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ 371ಜೆ ಪ್ರಕಾರ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡದ ವಿಚಾರವಾಗಿ ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು ಎಂದು ವಿಧಾನಸಭೆಯಲ್ಲಿ ಶಾಸಕ ರಾಜುಗೌಡ ಆಕ್ರೋಶ ಹೊರಹಾಕಿದ್ದಾರೆ.
Advertisement
ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ 371ಜೆ ಪ್ರಕಾರ ಮೀಸಲಾತಿ ನೀಡದ ವಿಚಾರವಾಗಿ ಶೂನ್ಯವೇಳೆಯಲ್ಲಿ ಶಿವರಾಜ್ ಪಾಟೀಲ್ ಪ್ರಸ್ತಾಪ ಮಾಡಿದರು. ರಾಯಚೂರು ನವೋದಯ ವೈದ್ಯಕೀಯ ಕಾಲೇಜು ಮಂಡಳಿ 371-ಜೆ ಕುತ್ತು ತರುವಂತೆ ನಡೆದುಕೊಂಡಿದೆ. ಹೈದರಾಬಾದ್ ಕರ್ನಾಟಕಕ್ಕೆ ಪ್ರತ್ಯೇಕ ಮೀಸಲಾತಿ ಕೊಡುವುದಕ್ಕೆ ಆಗಲ್ಲ ಎಂದು ಕೋರ್ಟ್‍ನಿಂದ ತಡೆಯಾಜ್ಞೆ ತಂದಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳ ಹಿತ ಕಾಪಾಡಬೇಕೆಂದು ಆಗ್ರಹಿಸಿದರು. ಈ ವೇಳೆ ಧ್ವನಿಗೂಡಿಸಿದ ಶಾಸಕ ರಾಜುಗೌಡ, ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು 371ಜೆ ನಮಗೆ ಹೋರಾಟದಿಂದ ಬಂದಿರುವುದು, ಇದನ್ನು ಪಡೆದುಕೊಳ್ಳಲು ಬಲಿದಾನ ಆಗಿದೆ ನಮ್ಮ ಸೌಲಭ್ಯ ತೆಗೆದುಕೊಂಡು ನಮ್ಮ ಮಕ್ಕಳಿಗೆ ಮೀಸಲಾತಿ ಕೊಡಲ್ಲ ಅಂದ್ರೆ ಹೇಗೆ? ಪ್ರಶ್ನಿಸಿದರು. ಇದನ್ನೂ ಓದಿ: ಜನ ಆಡಳಿತ ಪಕ್ಷದಲ್ಲಿ ಏನಾಗ್ತಿದೆ ಅಂತ ನೋಡ್ತಿದ್ದಾರೆ: ಯುಟಿ ಖಾದರ್
Advertisement
Advertisement
ನಮ್ಮ ಕ್ಷೇತ್ರದಲ್ಲಿ ನಾವು ಜನರ ಮುಂದೆ ಹೇಗೆ ಮುಖ ತೋರಿಸುವುದು? ಸರ್ಕಾರದ ವಕೀಲರು ಕೋರ್ಟ್‍ನಲ್ಲಿ ಸಮರ್ಥವಾಗಿ ವಾದ ಮಂಡನೆ ಮಾಡಬೇಕು. ಈ ಬಗ್ಗೆ ಸದನ ಸಮಿತಿ ರಚನೆ ಮಾಡಿ ಎಂದು ರಾಜುಗೌಡ ಆಗ್ರಹಿಸಿದರು. ಇದನ್ನೂ ಓದಿ: ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್ ಹೈಕಮಾಂಡ್‍ನಿಂದ ಡಿಕೆಶಿಗೆ ಟಾಸ್ಕ್
Advertisement
ಇದಕ್ಕೆ ಉತ್ತರಿಸಿದ ಸಚಿವ ಡಾ.ಸುಧಾಕರ್, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಈಗಾಗಲೇ ವಿಧ್ಯಾರ್ಥಿಗಳು ಪ್ರತಿಭಟನೆ ಮಾಡಿದ ಬಳಿಕ ಪ್ರವೇಶಾತಿ ಮಾಡಿಸಿಕೊಂಡಿದ್ದಾರೆ. ಇಂದು ಕೋರ್ಟ್‍ಲ್ಲಿ ಕೇಸ್ ಸಹ ಇದೆ. ಅಡ್ವೋಕೇಟ್ ಜನರಲ್ ಖುದ್ದು ಇಂದು ಕೋರ್ಟ್‍ಲ್ಲಿ ಇದ್ದಾರೆ. ಯಾವುದೇ ಕಾರಣಕ್ಕೂ ಹೈದ್ರಾಬಾದ್ ಕರ್ನಾಟಕಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸದನಕ್ಕೆ ಭರವಸೆ ನೀಡಿದರು.