ಬೆಳಗಾವಿ: ಮನುಷ್ಯನಿಗೆ ಜೀವನದಲ್ಲಿ ಸ್ವಾಭಾವಿಕವಾಗಿ ಆರೋಗ್ಯದಲ್ಲಿ ಏರಿಳಿತ ಸಹಜ. ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ. ನನ್ನ ಆರೋಗ್ಯ ಸ್ಥಿರವಾಗಿದೆ ಎಂದು ಡೆಪ್ಯೂಟಿ ಸ್ಪೀಕರ್ (Deputy Speaker) ಆನಂದ್ ಮಾಮನಿ (Anand Mamani) ಚೆನ್ನೈನ ಆಸ್ಪತ್ರೆಯಿಂದ (Chennai Hospital) ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
Advertisement
ಹೇಳಿಕೆಯಲ್ಲಿ ಏನಿದೆ:
ಮನುಷ್ಯನಿಗೆ ಜೀವನದಲ್ಲಿ ಸ್ವಾಭಾವಿಕವಾಗಿ ಆರೋಗ್ಯದಲ್ಲಿ ಏರಿಳಿತ ಆಗೋದು ಸಹಜ. ಕೆಲವು ವರ್ಷಗಳಿಂದ ನನಗೆ ಮಧುಮೇಹ ಖಾಯಿಲೆ ಇದೆ. ಆದ್ರೆ, ಕೆಲ ಮಾಧ್ಯಮದಲ್ಲಿ ಬೇರೆ ಬೇರೆ ಕಾರಣ ಹೇಳಿ ಸುಳ್ಳು ವದಂತಿಗಳು ಬರುತ್ತಿದೆ. ಮನೆ ದೇವರಾದ ಜಾಲಿಕಟ್ಟಿ ಬಸವಣ್ಣ, ತಂದೆ-ತಾಯಿ, ರಾಜ್ಯದ ಜನರ ಆಶೀರ್ವಾದ ಇದೆ. ನಾನು ಆರೋಗ್ಯವಾಗಿದ್ದೇನೆ. ಸುಳ್ಳು ವಂದತಿಗೆ ನಮ್ಮ ಕಾರ್ಯಕರ್ತರು ಕಿವಿಗೊಡಬಾರದು. ಇದನ್ನೂ ಓದಿ: ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು
Advertisement
Advertisement
ನನ್ನ ಕುಟುಂಬ ಸದಸ್ಯರು ನನ್ನ ಬೆನ್ನಿಗೆ ನಿಂತಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ, ಮಾಧ್ಯಮ ಸ್ನೇಹಿತರ ಸಹಕಾರ ಇದೆ. ಸಿಎಂ ಬಸವರಾಜ ಬೊಮ್ಮಾಯಿ (Basavarj Bommai) ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದ್ದಾರೆ. ಯಾವುದೇ ಕಾರಣಕ್ಕೂ ಧೈರ್ಯಗೆಡುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ನಿಮ್ಮ ಬೆನ್ನಿಗಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಬಿಎಸ್‍ವೈ (B.S Yediyurappa) ಸೇರಿದಂತೆ ಅನೇಕ ಶಾಸಕರು ನನಗೆ ಸಲಹೆ ಕೊಟ್ಟಿದ್ದಾರೆ. ಆ ನಿಟ್ಟಿನಲ್ಲಿ ನಾನು ಧೈರ್ಯವಾಗಿ ಬಂದು ತಮ್ಮೆಲ್ಲರ ಸೇವೆಗೆ ಮತ್ತೆ ಅಣಿಯಾಗುತ್ತೇನೆ. ನಾನು ಚೆನ್ನೈನಲ್ಲಿರುವ ಕಾರಣಕ್ಕೆ ಚಿಂತಾಜನಕ, ಶಿಫ್ಟ್ ಮಾಡ್ತಾರೆ ಅನ್ನೋದು ಯಾವುದು ಇಲ್ಲ. ಚೆನ್ನೈ ಆಸ್ಪತ್ರೆಗೆ ತಜ್ಞ ವೈದ್ಯರು ಬಂದ ಬಳಿಕ ತಪಾಸಣೆ ಮಾಡಿ ಔಷಧಿ ತೆಗೆದುಕೊಂಡು ಬರುತ್ತೇನೆ. ಆದಷ್ಟು ಬೇಗ ರಾಜಧಾನಿಗೆ ಬಂದು ತಮ್ಮ ಸಂಪರ್ಕಕ್ಕೆ ಸಿಗುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ! ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು
Advertisement
Live Tv
[brid partner=56869869 player=32851 video=960834 autoplay=true]