ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ (Karnataka Vidhanasabha Election 2023) ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾದ ಮೇಲೆ ಒಟ್ಟು 22.79 ಕೋಟಿ ನಗದು (Money) ಹಾಗೂ 1,52 ಕೋಟಿ ಮೌಲ್ಯದ ಲಿಕ್ಕರ್ (Liquor) ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ನಗರ ಚುನಾವಣಾಧಿಕಾರಿಗಳು ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಅದರಲ್ಲಿ ನೀತಿ ಸಂಹಿತೆ (Code Of Conduct) ಉಲ್ಲಂಘನೆಯಾಗಿ ನಗದು, ಲಿಕ್ಕರ್, ಗಾಂಜಾ ವೆಹಿಕಲ್ ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಿಚ್ಚ ಸುದೀಪ್ ನಡೆಗೆ ಅಚ್ಚರಿಯಲ್ಲ, ನೋವು ತಂದಿದೆ : ಪ್ರಕಾಶ್ ರಾಜ್
ಬುಧವಾರ ಒಂದೇ ದಿನ 6,52, 510 ನಗದು, 11,441,376 ಮೌಲ್ಯದ ಲಿಕ್ಕರ್, 2,001250 ಮೌಲ್ಯದ ಡ್ರಗ್ಸ್ ಹಾಗೂ 5 ವೆಹಿಕಲ್ ಗಳಲ್ಲಿ 38,5000 ನಗದು ಪತ್ತೆಯಾಗಿದೆ. ಒಟ್ಟಿನಲ್ಲಿ ನೀತೆ ಸಂಹಿತೆ ಜಾರಿಯಾದ ಮೇಲೆ ಇದ ಒಟ್ಟು 22.79 ಕೋಟಿ ನಗದು ಹಾಗೂ 3.14 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ ಎಂದು ತಿಳಿಸಿದ್ದರು.