ಮೈಸೂರು: ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಆಂಜನೇಯ ಹುಟ್ಟಿದ ಸ್ಥಳ ಅಂಜನಾದ್ರಿ (Anjanadri) ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ವಿಶೇಷ ಮಂಡಳಿ ರಚನೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ಮೈಸೂರಿನಲ್ಲಿ (Mysuru) ಗುರುವಾರ ಹೇಳಿದ್ದಾರೆ. ಇದನ್ನೂ ಓದಿ: ತಂದೆಗೆ ಟಿಕೆಟ್ ಸಿಕ್ಕಿದ್ದಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಅಭ್ಯರ್ಥಿಯ ಪುತ್ರ – ಕಾಂಗ್ರೆಸ್‍ನಿಂದ ವೀಡಿಯೋ ರಿಲೀಸ್
ನಗರದ ಚಾಮುಂಡೇಶ್ವರಿ ದೇವಾಲಯಕ್ಕೆ (Chamundeshwari Temple) ಭೇಟಿ ನೀಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಗರಿಗೆ (BJP) ಗಾಬರಿಯಾಗಿದೆ. ಬಜರಂಗದಳಕ್ಕೂ ಆಂಜನೇಯನಿಗೂ ವ್ಯತ್ಯಾಸವಿದೆ. ಬಜರಂಗದಳ ಒಂದು ರಾಜಕೀಯ ಪಕ್ಷದ ಭಾಗ. ಹುಟ್ಟುವ ಎಲ್ಲವೂ ಬಸವ ಆಗುವುದಕ್ಕೆ ಸಾಧ್ಯವಿಲ್ಲ. ಹನುಮಂತನ ಹೆಸರಿಟ್ಟುಕೊಂಡವರೆಲ್ಲಾ ಹನುಮಂತ ಆಗಲು ಸಾಧ್ಯವೇ ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
Advertisement
Advertisement
ಬಜರಂಗದಳದವರು (Bajrang Dal) ನೈತಿಕ ಪೊಲೀಸ್ ಗಿರಿ ಮಾಡುತ್ತಿದ್ದಾರೆ. ಬಜರಂಗ ಬಲಿಯ ನಿಜವಾದ ಭಕ್ತರು ನಾವು. ಬಜರಂಗಿಯ ಕುಂಕುಮ ನನ್ನ ಹಣೆಯಲ್ಲಿಯೇ ಇದೆ. ಈ ನಾಡಿನಲ್ಲಿ ಆಂಜನೇಯ ಹುಟ್ಟಿದ್ದಕ್ಕೆ ಸಾಕ್ಷಿ ಇದೆ. ಇತಿಹಾಸ ಸೃಷ್ಟಿಸಿದ ಆಂಜನೇಯ ದೇವಾಲಯ ಅಭಿವೃದ್ಧಿಗೆ ಕಾಂಗ್ರೆಸ್ ವಿಶೇಷ ಒತ್ತು ನೀಡಲಿದೆ. ಯುವಕರಿಗೆ ಆಂಜನೇಯನ ವಿಚಾರಗಳನ್ನು ಬೆಳೆಸಲು ವಿಶೇಷ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಮಾಡಲು ಪ್ರಯತ್ನಿಸಿದರು.
Advertisement
Advertisement
ಬಿಜೆಪಿಯವರು ಒಂದಾದರೂ ಆಂಜನೇಯನ ದೇವಾಲಯವನ್ನು ಕಟ್ಟಿದ್ದಾರಾ? ಯಾರಿಗೆ ಏನೂ ಸಹಾಯ ಮಾಡಿದ್ದೇವೆ, ಕೆಲಸ ಮಾಡಿದ್ದೇವೆ ಎಂದು ಪ್ರಧಾನಿಗಳು ಭಾಷಣದಲ್ಲಿ ಹೇಳುತ್ತಿಲ್ಲ. ದೇವರ ಹೆಸರಿನಲ್ಲಿ ಪ್ರಧಾನಿ ಹಾಗೂ ಬಿಜೆಪಿ ರಾಜಕೀಯ ನಡೆಸಲು ಯತ್ನಿಸುತ್ತಿದೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪ್ರಾಣಾಳಿಕೆಯನ್ನು ಈಶ್ವರಪ್ಪ ಸುಟ್ಟು ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಭ್ರಷ್ಟಾಚಾರದ ಫಲವಾಗಿ ಬಿಜೆಪಿಗರು ಈಶ್ವರಪ್ಪನನ್ನೆ ಸುಟ್ಟು ಹಾಕಿದ್ದಾರೆ ಎಂದು ಹೇಳಿ ತಿರುಗೇಟು ನೀಡಿದರು.
ಗರ್ಭಗುಡಿಯಲ್ಲಿ ರುದ್ರಾಕ್ಷಿ ಜಪ ಮಾಡಿದ್ದೇನೆ, ರಾಜ್ಯಕ್ಕೆ ಬಂದಿರುವ ದುಃಖವನ್ನು ದೂರ ಮಾಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದೇನೆ. ದುಷ್ಟರನ್ನು ದೂರ ಮಾಡಿ ಶಿಷ್ಟರನ್ನು ದೇವರು ಕಾಪಾಡುತ್ತಾರೆ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ಧರಾಮಯ್ಯ ಪರವಾಗಿ ರಮ್ಯಾ, ಶಿವಣ್ಣ ದುನಿಯಾ ವಿಜಯ್ ಕ್ಯಾಂಪೇನ್