ಮೈಸೂರು: ಸಿದ್ದರಾಮಯ್ಯಗೆ (Siddaramaiah) ಚಾಮುಂಡೇಶ್ವರಿ ರಾಜಕಾರಣವೇ ಗೊತ್ತಿಲ್ಲ. ನನ್ನಷ್ಟು ಗಟ್ಟಿ ಸಿದ್ದರಾಮಯ್ಯ ಅಲ್ಲವೇ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶಾಸಕ ಜಿ.ಟಿ ದೇವೇಗೌಡ (GT Devegowda) ಕಿಡಿಕಾರಿದರು.
ಹೊಂದಾಣಿಕೆ ಹೇಳಿಕೆ ಬಗ್ಗೆ ಸಿದ್ದು ವಿರುದ್ಧ ಅವರು, ಸಿದ್ದರಾಮಯ್ಯ ರೀತಿ ಅಧಿಕಾರಕ್ಕಾಗಿ ಯಾರ್ ಯಾರ ಮನೆ ಬಾಗಿಲಿಗೂ ಹೋದವನಲ್ಲ. ಈ ಬಾರಿ ಚುನಾವಣೆ (Election) ಚಾಮುಂಡೇಶ್ವರಿ ಜನರ ಆಶಿರ್ವಾದಿಂದ ಗೆಲ್ಲುತ್ತೇನೆ. ಪ್ರಚಾರದ ವೇಳೆ ನನಗೆ ಅದ್ದೂರಿ ಸ್ವಾಗತ ಕೊಟ್ಟಿದ್ದರು. ಸಿದ್ದರಾಮಯ್ಯ ಇಷ್ಟು ವರ್ಷ ಇಲ್ಲಿ ರಾಜಕೀಯ ಮಾಡಿದ್ದಾರೆ. ಆದರೆ ನನ್ನ ವಿರುದ್ಧ ಯಾರನ್ನು ಕಣಕ್ಕಿಳಿಸಬೇಕು ಅನ್ನೋದು ಅವರಿಗೆ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.
Advertisement
Advertisement
ತಾಲೂಕು ಬೋರ್ಡ್, ಎಪಿಎಂಸಿ ಚುನಾವಣೆಯಲ್ಲಿ ಅಪ್ಪ ಮಕ್ಕಳು ಸೋತಿದ್ದಾರೆ. ಅಂತಹವರನ್ನು ಕರ್ಕೊಂಡು ಬಂದು ನನ್ನ ವಿರುದ್ಧ ನಿಲ್ಲಿಸಿದ್ದಾರೆ. ಸಿದ್ದರಾಮಯ್ಯ ಬರಿ ದ್ವೇಷಕ್ಕೆ ರಾಜಕಾರಣ ಮಾಡಿದರು. ಅಷ್ಟೂ ಇದ್ರೆ ಅವರಿಗಾಗಿ ಸರ್ವಸ್ವ ತ್ಯಾಗ ಮಾಡಿದ ಮರಿಗೌಡನಿಗೆ ಕೊಡಬೇಕಿತ್ತು. ಒಕ್ಕಲಿಗರಲ್ಲೇ ಕೊಡುವುದಿದ್ದರೆ ಸತ್ಯಪ್ಪ ಮಗ ಅರುಣ್, ನರಸೇಗೌಡ, ಕೃಷ್ಣಸಾಗರ್ ಇದ್ದರು. ಇವರಿಗೆ ಕೊಟ್ಟಿದ್ರೆ ಗೌರವಯುತವಾಗಿ ಸೋಲುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಇವಿಎಂನ್ನು ಮತಗಟ್ಟೆಯಲ್ಲೇ ಬಿಟ್ಟು ಹೋದ ಆರೋಪ- ಎಣಿಕೆ ದಿನ ಲೆಕ್ಕ ಪಕ್ಕಾ ಇರಲಿ ಎಂದ ಮತದಾರ
Advertisement
Advertisement
ಮಾವಿನಹಳ್ಳಿ ಸಿದ್ದೇಗೌಡ ಅವರ ಊರಲ್ಲೇ ಎಷ್ಟು ವೋಟ್ ತಗೋತಾನೆ ನೋಡೊಣ ಬನ್ನಿ. ಈ ಸಿದ್ದೇಗೌಡನನ್ನು ನಾನು ಯಾಕೆ ಬುಕ್ ಮಾಡಲಿ. ನಾನು ಸಿದ್ದೇಗೌಡನ ಜೊತೆ ಸೇರೋದು ಬಿಡಿ, ಅವನನ್ನು ನನ್ನ ಮನೆ ಬಾಗಿಲಿಗೆ ಸೇರ್ಸಲ್ಲ. ನಾನು ಗೆಲ್ಲಲಿ ಸೋಲಲಿ ನನ್ನ ಜಾಯಿಮಾನದಲ್ಲಿ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಲ್ಲ. ಈ ಸಿದ್ದೇಗೌಡನ ಬಗ್ಗೆ ಸಿದ್ದರಾಮಯ್ಯಗೆ ನಾನು ಹೇಳಿದ್ದೆ. ನಾನು ಹೇಳಿದ್ದೆಲ್ಲ ಅವರು ಮರೆತು ಹೋಗಿದ್ದಾರೆ. ನನಗೆ ಹೋದ ಚುನಾವಣೆಯೇ ಕಷ್ಟ ಆಗಲಿಲ್ಲ. ಇನ್ನು ಈಗ ಕಷ್ಟ ಆಗುತ್ತಾ? ಮಾವಿನಹಳ್ಳಿ ಸಿದ್ದೇಗೌಡ ಬುಕ್ ಮಾಡೊದಲ್ಲ, ಜೀವಮಾನದಲ್ಲಿ ಮಾತನಾಡಿಸಲ್ಲ. ನನ್ನ ಬಿಟ್ಟು ಹೋದ ಐದು ಜನರನ್ನೂ ನಾನು ಹತ್ತಿರ ಸೇರಿಸಲ್ಲ ಎಂದು ಗುಡುಗಿದರು. ಇದನ್ನೂ ಓದಿ: ಒಂದೇ ಅವಧಿಯಲ್ಲಿ ಒಬ್ಬ 2 ಅಸೆಂಬ್ಲಿ, 2 ಎಂಪಿ ಚುನಾವಣೆ ಎದುರಿಸಿದ್ರೆ ಅದು ನಾನೊಬ್ಬನೇ: ಪುಟ್ಟರಾಜು