ಬೆಳಗಾವಿ: ಬುದ್ಧ, ಬಸವ, ಅಂಬೇಡ್ಕರ್ ಚಿಂತನೆಗಳನ್ನು ಬಲವಾಗಿ ವಾದಿಸುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಮತ್ತೊಮ್ಮೆ ಮೌಢ್ಯಕ್ಕೆ ಸೆಡ್ಡು ಹೊಡೆದಿದ್ದು, ಅಮವಾಸ್ಯೆ ದಿನದಂದು ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಮವಾಸ್ಯೆ ದಿನದಂದೇ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ. ಏಪ್ರಿಲ್ 20 ಕೊನೆ ದಿನ ನಾಮಪತ್ರ ಸಲ್ಲಿಸಲು ಮೂಹರ್ತ ಫಿಕ್ಸ್ ಆಗಿದ್ದು, ಕಳೆದ ಬಾರಿ ಸತೀಶ್ ಜಾರಕಿಹೊಳಿ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ್ದರು. ಈ ಬಾರಿ ಚುನಾವಣೆಯಲ್ಲಿಯೂ ಅಮವಾಸ್ಯೆ ರಾಹುಕಾಲ ದಿನದಂದೇ ನಾಮಪತ್ರ ಸಲ್ಲಿಕೆಗೆ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ‘ಟಿಕೆಟ್ ಕೈತಪ್ಪಲು ಸಂತೋಷ್ ಕಾರಣ’ – ಶೆಟ್ಟರ್ ಆರೋಪಕ್ಕೆ ನಾವ್ ತಲೆಕೆಡಿಸಿಕೊಳ್ಳಲ್ಲ: ಬೊಮ್ಮಾಯಿ
Advertisement
Advertisement
ಘಟಾನುಘಟಿ ರಾಜಕೀಯ ನಾಯಕರಿಂದ ಇಂದು ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಕೆಯಾಗಿದೆ. ಅಪಾರ ಪ್ರಮಾಣದ ಬೆಂಬಲಿಗರ ಜೊತೆಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ತಮ್ಮ ಕ್ಷೇತ್ರಗಳಲ್ಲಿ ಶಕ್ತಿ ಪ್ರದರ್ಶನ ತೋರಲಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಹಶೀಲ್ದಾರ್ ಕಚೇರಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್, ಚಿಕ್ಕೋಡಿ ತಹಶೀಲ್ದಾರ್ ಕಚೇರಿಯಲ್ಲಿ ಮಾಜಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ್ ಕತ್ತಿ ಅನೇಕರು ನಾಮಪತ್ರ ಸಲ್ಲಿಕೆ ಮಾಡಿದರು. ಇದನ್ನೂ ಓದಿ: ಅಣ್ಣಾಮಲೈ ವಿರುದ್ಧವೂ ಕಿಡಿಕಾರಿದ ಜಗದೀಶ್ ಶೆಟ್ಟರ್