ಹಾವೇರಿ: ವಿಧಾನಸಭಾ ಚುನಾವಣೆ (Karnataka Assembly Election) ಸಮೀಪಿಸುತ್ತಿದ್ದಂತೆ ಹಾವೇರಿ (Haveri) ಜಿಲ್ಲೆಯಲ್ಲಿ ಭರ್ಜರಿ ಕುಕ್ಕರ್ ಪಾಲಿಟಿಕ್ಸ್ ಜೋರಾಗಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ (R.Shankar) ಮತದಾರರಿಗೆ ಕುಕ್ಕರ್ (Cooker) ಗಿಫ್ಟ್ (Gift) ನೀಡಿದ್ದಾರೆ.
ಮನೆ ಮನೆಗೆ ಮೊದಲು ಆರ್.ಶಂಕರ್ ಬೆಂಬಲಿಗರು ಕೂಪನ್ ನೀಡಿದ್ದರು. ಆ ಬಳಿಕ ಕೂಪನ್ ತೋರಿಸಿದವರಿಗೆ ಕುಕ್ಕರ್ ನೀಡಲಾಗಿದೆ. ಸದಾ ನಿಮ್ಮ ಸೇವೆಗಾಗಿ ನಿಮ್ಮ ಮನೆ ಮಗ ಆರ್. ಶಂಕರ್ ಅಂತ ಕುಕ್ಕರ್ ಮೇಲೆ ಬರೆಸಲಾಗಿದೆ. ಸದ್ಯ ಬಿಜೆಪಿ ಎಂಎಲ್‍ಸಿ ಆರ್. ಶಂಕರ್ ಈ ಬಾರಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆಗೆ ಸಜ್ಜಾಗಿದ್ದಾರೆ. ಟಿಕೆಟ್ (Ticket) ಸಿಕ್ಕರೆ ಬಿಜೆಪಿಯಿಂದ (BJP), ಇಲ್ಲದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಎಲ್ಲಾ ರೀತಿಯ ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ರಾಜಕೀಯ ವಿಚಾರದಲ್ಲಿ ಜಗಳ- ಮಚ್ಚಿನಿಂದ ಕೈ ಕಡಿದ ಸ್ನೇಹಿತ
ಇತ್ತ ಆರ್. ಶಂಕರ್ ಕಾಂಗ್ರೆಸ್ ಸೇರ್ತಾರೆ ಅನ್ನೋ ಸುದ್ದಿಯೂ ಜೋರಾಗಿ ಹರಿದಾಡುತ್ತಿದೆ. ಕಳೆದ 2018ರ ವಿಧಾನ ಚುನಾವಣೆಯಲ್ಲಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಗೆದ್ದು, ರಾಜಕೀಯ ಮೇಲಾಟದಿಂದ 2018ರಲ್ಲಿ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧತೆ ನಡೆಸುತ್ತಿದ್ದಾಗ ಶಂಕರ್, ಯಡಿಯೂರಪ್ಪನವರಿಗೆ (B.S Yediyurappa) ಬೆಂಬಲ ನೀಡಲು ಮುಂದಾಗಿದ್ದರು. ಆದರೆ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಅದೇ ದಿನ ಸಂಜೆ ಕೆಪಿಸಿಸಿ ಕಚೇರಿಗೆ ಹೋಗಿ ಕಾಂಗ್ರೆಸ್ (Congress)-ಜೆಡಿಎಸ್ (JDS) ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿ ಬಳಿಕ ಕಾಂಗ್ರೆಸ್ ಜೊತೆಗೆ ತಮ್ಮ ಪಕ್ಷವನ್ನು ವಿಲೀನಗೊಳಿಸಿದ್ದರು. ಇದನ್ನೂ ಓದಿ: ಪ್ಲೀಸ್ ಮುಕ್ತಿ ಕೊಡಿಸಿ ಸರ್- ಎಮ್ಮೆಗಳ ವಿರುದ್ಧ ಅರವಿಂದ ಲಿಂಬಾವಳಿಗೆ ಟೆಕ್ಕಿಗಳಿಂದ ದೂರು!
ಆದರೆ ಬಳಿಕ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರ್ಪಡೆಗೊಂಡರು. ಈ ವೇಳೆ ಸಚಿವರನ್ನಾಗಿ ಮಾಡುವ ಭರವಸೆ ಬಿ.ಎಸ್ ಯಡಿಯೂರಪ್ಪ ನೀಡಿದ್ದರು. ತಮ್ಮ ರಾಜಕೀಯ ಅಸ್ಥಿರತೆಯಿಂದ ಕಂಗಾಲಾಗಿರೋ ಶಂಕರ್. ಇದೀಗ ಮತ್ತೆ ರಾಣೆಬೆನ್ನೂರು ಅಖಾಡಕ್ಕೆ ಧುಮುಕಲು ಸಜ್ಜಾಗಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k