ಬೆಂಗಳೂರು: ಭಾರೀ ಹೈಡ್ರಾಮಾದ ಬಳಿಕ ಜಯನಗರ ಗೊಂದಲಕ್ಕೆ ತೆರೆ ಬಿದ್ದಿದೆ. ಜಯನಗರ (Jayanagar Constituency) ದಲ್ಲಿ ಬಿಜೆಪಿ (BJP) ಅಭ್ಯರ್ಥಿ ರಾಮಮೂರ್ತಿ (Ramamurthy) ಗೆಲುವು ತನ್ನದಾಗಿಸಿಕೊಂಡಿದ್ದಾರೆ.
ಕೇವಲ 16 ಮತಗಳ ಅಂತರದಿಂದ ರಾಮಮೂರ್ತಿಗೆ ಜಯ ದೊರೆತಿದೆ. ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿಯೇ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಇದನ್ನೂ ಓದಿ: ಜಯನಗರದಲ್ಲಿ ಯಾರಿಗೆ ಜಯ? – ಪರಿಸ್ಥಿತಿ ಉದ್ವಿಗ್ನ, ಭಾರೀ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ
ಇತ್ತ ಬಿಜೆಪಿ ವಿರುದ್ಧ ಕಾಂಗ್ರೆಸ್ (Congress) ಕಾರ್ಯಕರ್ತರು ಘೋಷಣೆ ಕೂಗಿದ ಪ್ರಸಂಗವೂ ನಡೆದಿದೆ. ಮೋಸ.. ಮೋಸ ಬಿಜೆಪಿ ಅಂತ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಇನ್ನು ಕೌಂಟಿಂಗ್ ಸೆಂಟರ್ ಮುಂಭಾಗ ಸೌಮ್ಯಾ ರೆಡ್ಡಿ (Sowmya Reddy) ಕಣ್ಣೀರು ಹಾಕಿದ್ದಾರೆ. ಅಲ್ಲದೆ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ; 1 ಮತದ ಅಂತರದಿಂದ ಸೋತಿದ್ದ ಅಭ್ಯರ್ಥಿ 59 ಸಾವಿರ ದಾಖಲೆ ಮತಗಳಲ್ಲಿ ಗೆಲುವು
ರೀಕೌಂಟಿಂಗ್‍ನಲ್ಲಿ ಬಿಜೆಪಿಗೆ ಮುನ್ನಡೆ ಹಿನ್ನೆಲೆಯಲ್ಲಿ ಜಯನಗರ ಕೌಂಟಿಂಗ್ ಸೆಂಟರ್ ಬಳಿ ಹೈಡ್ರಾಮಾ ನಡೆದಿತ್ತು. ಕೌಂಟಿಂಗ್ ಸೆಂಟರ್ ಬಳಿ ಡಿಕೆ ಬ್ರದರ್ಸ್ ಕೂಡ ದೌಡಾಯಿಸಿದ್ದರು. ಈ ವೇಳೆ ಪೊಲೀಸರ ಜೊತೆ ಕಾಂಗ್ರೆಸ್ ಮುಖಂಡರು ವಾಗ್ವಾದ ಕೂಡ ನಡೆಸಿದ್ದಾರೆ. ಗೇಟ್ ತಳ್ಳಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಪೊಲೀಸರು ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದರು.
1989 ರಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಜಯನಗರ, 2008, 2013 ರಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿತ್ತು. 2018 ರ ಚುನಾವಣೆಯಲ್ಲಿ ಜಯನಗರ ಕ್ಷೇತ್ರಕ್ಕೆ ಸೌಮ್ಯರೆಡ್ಡಿ ಎಂಟ್ರಿ ಕೊಟ್ಟರು. ಚುನಾವಣೆಯಲ್ಲಿ ಗೆದ್ದು ಕ್ಷೇತ್ರವನ್ನ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು. 2018 ಚುನಾವಣೆಯಲ್ಲಿ ಗೆದ್ದು, ಮತ್ತೆ 2023 ರ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಈ ಬಾರಿ ಸೋಲು ಕಂಡರು.