ಬೆಂಗಳೂರು: ಬೆಂಗಳೂರು (Bengaluru) ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾವಿರಾರು ಎಕರೆ ಸರ್ಕಾರಿ ಜಮೀನು ಅಕ್ರಮ ಒತ್ತುವರಿಯಾಗಿದೆ (Illegal Encroachment) ಎಂದು ಕಂದಾಯ ಸಚಿವ ಆರ್.ಅಶೋಕ್ (R.Ashok) ಒಪ್ಪಿಕೊಂಡಿದ್ದಾರೆ.
Advertisement
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಗೋಪಿನಾಥ್ ಒತ್ತುವರಿ ಬಗ್ಗೆ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರ ನೀಡಿದ ಸಚಿವ ಅಶೋಕ್, ಬೆಂಗಳೂರು ನಗರದಲ್ಲಿ 1,22,918 ಎಕರೆ ಸರ್ಕಾರಿ ಜಮೀನು ಇದೆ. ಇದರಲ್ಲಿ 38,942 ಎಕರೆ ಒತ್ತುವರಿ ಆಗಿದೆ. ಈ ಪೈಕಿ 16478 ಎಕರೆ ಒತ್ತುವರಿ ತೆರವು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ವಿರೋಧ ಪಕ್ಷ ಆಗಿರಲು ನಾಲಾಯಕ್: ನಳಿನ್ ಕುಮಾರ್ ಕಟೀಲ್
Advertisement
Advertisement
ಬೆಂಗಳೂರು ಗ್ರಾಮಾಂತರದಲ್ಲಿ 1,08,295 ಎಕರೆ ಸರ್ಕಾರಿ ಜಮೀನು ಇದೆ. ಈ ಪೈಕಿ 36,229 ಎಕರೆ ಒತ್ತುವರಿ ಆಗಿದೆ. ಇದರಲ್ಲಿ 11,779 ಒತ್ತುವರಿ ತೆರವು ಆಗಿದೆ ಮಾಹಿತಿ ನೀಡಿದರು. ಇದನ್ನೂ ಓದಿ: ದೇವೇಗೌಡ್ರ ಮನೆಗೆ ಬೊಮ್ಮಾಯಿ ಭೇಟಿ – ಆರೋಗ್ಯ ವಿಚಾರಿಸಿ, ಈಗ್ಲೂ ಮುದ್ದೆ ತಿಂತೀರಾ ಸರ್ ಎಂದ ಸಿಎಂ
Advertisement
ಈಗಾಗಲೇ ಒತ್ತುವರಿ ತೆರವು ಮಾಡಿರೋ ಜಾಗವನ್ನ ಆಸ್ಪತ್ರೆ, ಶಾಲೆ, ಸನ್ಮಾಶನ ಸೇರಿ ಸಾರ್ವಜನಿಕ ಉಪಯೋಗಕ್ಕೆ ನೀಡಲಾಗುತ್ತದೆ. ಇನ್ನು 20 ವರ್ಷ ಹೋದ್ರೆ ಸರ್ಕಾರಿ ಜಾಗ ನಮಗೆ ಸಿಗೊಲ್ಲ. ಹೀಗಾಗಿ ಒತ್ತುವರಿ ತೆರವು ಜಾಗವನ್ನು ಸಾರ್ವಜನಿಕರ ಉಪಯೋಗಕ್ಕೆ ನೀಡುತ್ತೇವೆ ಎಂದು ಸಚಿವರು ಉತ್ತರ ನೀಡಿದ್ದಾರೆ.