– ಬೆಳಗ್ಗೆ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ
– ಕರಾವಳಿ ಕರ್ನಾಟಕದಲ್ಲಿ ಬಂದ್‌ಗಿಲ್ಲ ಬೆಂಬಲ
– ಹಳೇ ಮೈಸೂರು, ಕಲ್ಯಾಣ ಕರ್ನಾಟಕದಲ್ಲಿ ಮಿಶ್ರ ಬೆಂಬಲ
ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಸಂಬಂಧ ಶುರುವಾದ ಸಮರ ಈಗ ಕರ್ನಾಟಕ ಬಂದ್‌ವರೆಗೆ (Karnataka Bandh) ಬಂದಿದೆ. ಕರ್ನಾಟಕದಲ್ಲಿ ಎಂಇಎಸ್ ನಿಷೇಧ, ಮೇಕೆದಾಟು, ಕಳಸಬಂಡೂರಿ ಯೋಜನೆಗೆ ಶೀಘ್ರ ಅನುಮತಿ ಸೇರಿದಂತೆ ನಾಡು-ನುಡಿ, ನೆಲ-ಜಲ ವಿಷಯವಾಗಿ ಕನ್ನಡ ಒಕ್ಕೂಟಗಳು ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.
ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು ಬೆಳಗ್ಗೆ ಬೆಂಗಳೂರಿನ (Bengaluru) ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಂಡಿವೆ. ಬೆಳಗಾವಿ, ಮಂಡ್ಯ, ರಾಮನಗರದಲ್ಲಿ ಸಂಪೂರ್ಣ ಬೆಂಬಲ ಸಿಕ್ಕಿದೆ. ಮೈಸೂರು, ಕಲ್ಯಾಣ ಕರ್ನಾಟಕದಲ್ಲಿ ಮಿಶ್ರ ಬೆಂಬಲ ಇದೆ. ಕರಾವಳಿ ಕರ್ನಾಟಕದಲ್ಲಿ ಬಂದ್‌ಗೆ ಯಾವುದೇ ಸಂಘಟನೆ ಕರೆ ನೀಡಿಲ್ಲ.
ಬಂದ್‌ಗೆ ಬೆಂಗಳೂರಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬೆಳಗ್ಗೆಯಿಂದಲೇ ಗಸ್ತಿನಲ್ಲಿದ್ದಾರೆ. ಯಾವುದೇ ಮೆರವಣಿಗೆ, ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.
ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ. ಬಲವಂತವಾಗಿ ಬಂದ್ ಮಾಡಿಸಿದ್ರೆ ಶಿಸ್ತುಕ್ರಮ ಕೈಗೊಳ್ಳಲಿದ್ದಾರೆ. ಟೌನ್ ಹಾಲ್, ಮೈಸೂರ್ ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್‌ನಲ್ಲಿ ಖಾಕಿ ಅಲರ್ಟ್ ಆಗಿದ್ದು 4 ಎಸಿಪಿ ಸೇರಿದಂತೆ 11 ಇನ್ಸ್‌ಪೆಕ್ಟರ್‌ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಪ್ರಮುಖ ಸ್ಥಳದಲ್ಲಿ 65 ಪಿಎಸ್‌ಐ, ನಗರದಲ್ಲಿ ಒಟ್ಟು 1,200 ಪೊಲೀಸರ ನಿಯೋಜನೆ ಮಾಡಲಾಗಿದೆ. ಕೆಎಸ್‌ಆರ್‌ಪಿ 46, ಸಿಎಆರ್ 30 ತುಕಡಿ ಜೊತೆ ಎರಡು ವಾಟರ್ ಜೆಟ್‌ಗಳನ್ನು ನಿಯೋಜಿಸಿದ್ದಾರೆ.
ಬೆಂಗಳೂರಿನ ಆರ್.ಮಾರ್ಕೆಟ್‌ಗೆ ತಟ್ಟದ ಬಂದ್ ಬಿಸಿ ತಟ್ಟಿಲ್ಲ. ಬೆಳಗ್ಗೆ ಎಂದಿನಂತೆ ವ್ಯಾಪಾರ, ವಹಿವಾಟು ನಡೆಯುತ್ತಿದೆ. ಹೂ, ಹಣ್ಣು ಖರೀದಿಸುವಲ್ಲಿ ಜನರು ಬ್ಯುಸಿಯಾಗಿದ್ದು ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ಸುಗಳು ಎಂದಿನಂತೆ ನಗರದಲ್ಲಿ ಸಂಚರಿಸುತ್ತಿದೆ.
ಬೆಂಬಲ ಎಲ್ಲಿ ಇಲ್ಲ:
ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ.
ಬಂದ್- 50:50
ಮೈಸೂರು, ಕೊಡಗು, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಬಳ್ಳಾರಿ, ಬೀದರ್, ವಿಜಯಪುರ, ಚಿಕ್ಕೋಡಿ, ಕಲಬುರಗಿ, ಹಾವೇರಿ, ಹುಬ್ಬಳ್ಳಿ, ಕಾರವಾರ, ಮಂಗಳೂರು, ಶಿವಮೊಗ್ಗ, ಉಡುಪಿ, ಯಾದಗಿರಿ.