– ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಯಥಾಸ್ಥಿತಿ
ಬೆಂಗಳೂರು: ಮರಾಠಿಗರ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲೆ ಎಂಇಎಸ್ (MES) ಪುಂಡರ ದಬ್ಬಾಳಿಕೆ ಖಂಡಿಸಿ ಶನಿವಾರ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. ಆದರೆ ಬಂದ್ ಇದ್ದರೂ ಎಂದಿನಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಸಂಚರಿಸುತ್ತಿವೆ. ನಗರದ ಮೆಜೆಸ್ಟಿಕ್‌ನ (Mejestic)ಬಿಎಂಟಿಸಿ ಬಸ್ ನಿಲ್ದಾಣ ಯಥಾಸ್ಥಿತಿಯಲ್ಲಿದೆ. ಆದರೆ ಪ್ರಯಾಣಿಕರ ಸಂಖ್ಯೆ ಸ್ಪಲ್ಪ ಕಡಿಮೆಯಾಗಿದೆ.
ಇನ್ನು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ (Satellite Bus Station) ಬೆಳ್ಳಂಬೆಳಗ್ಗೆ ಬಂದ್ ಬಿಸಿ ತಟ್ಟಿದೆ. ತಮ್ಮ ತಮ್ಮ ಊರುಗಳಿಗೆ ವೀಕೆಂಡ್‌ಗಳಲ್ಲೇ ಹೆಚ್ಚಾಗಿ ಹೋಗುವ ಜನ ಇಂದು ಬಂದ್ ಕಾರಣಕ್ಕೆ ಸ್ಯಾಟಲೈಟ್ ಬಸ್ ನಿಲ್ದಾಣದ ಕಡೆ ಮುಖ ಮಾಡಿಲ್ಲ. ಸ್ಯಾಟಲೈಟ್ ಕೆಎಸ್‌ಆರ್‌ಟಿಸಿ (KSRTC) ನಿಲ್ದಾಣ ಇಂದು ಪ್ರಯಾಣಿಕರ ಕೊರತೆ ಎದುರಿಸುತ್ತಿದೆ. ಇದನ್ನೂ ಓದಿ: ಬಲವಂತವಾಗಿ ಬಂದ್ ಮಾಡಿದ್ರೆ ಶಿಸ್ತು ಕ್ರಮ – ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ
ರಾಮನಗರ, ಮೈಸೂರು, ಮದ್ದೂರು, ಮಂಡ್ಯ, ಚಾಮರಾಜನಗರ, ಕೊಳ್ಳೇಗಾಲ, ಟಿ.ನರಸೀಪುರ, ನಂಜನಗೂಡು, ಮಳವಳ್ಳಿ, ಕೊಡಗು, ಹಾಸನ ಭಾಗಕ್ಕೆ ಹೋಗುವವರು ಬಹಳಷ್ಟು ಜನ ಬಂದ್ ಅಂತ ಇಂದು ಮನೆಗಳಲ್ಲೇ ಉಳಿದುಕೊಂಡಿದ್ದಾರೆ. ಇದರ ಪರಿಣಾಮ ಬಸ್‌ಗಳು ಖಾಲಿ ಖಾಲಿ ಸಂಚಾರ ಮಾಡುತ್ತಿವೆ. ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಖ್ಯೆ, ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ. ಬಸ್‌ಗಳಿದ್ದರೂ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ. ಇದನ್ನೂ ಓದಿ: ಬೇಸಿಗೆ ರಜೆ ಹಿನ್ನಲೆ ಕಲಬುರಗಿ – ದೌಂಡ್ ನಡುವೆ 180 ವಿಶೇಷ ರೈಲು ಸಂಚಾರ