– ಕರಾವಳಿಯಲ್ಲಿ ಬಂದ್‌ಗಿಲ್ಲ ಬೆಂಬಲ
ಬೆಂಗಳೂರು: ಎಂಇಎಸ್ (MES) ಪುಂಡಾಟಿಕೆಗೆ ಕಡಿವಾಣ ಹಾಕಬೇಕು, ವಿವಿಧ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು, ಕನ್ನಡಿಗರ ಮೇಲೆ ಪರಭಾಷಿಕರ ದಾಳಿ ನಿಲ್ಲಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಶನಿವಾರ (ಮಾ.22) ಕರ್ನಾಟಕ ಬಂದ್ (karnataka bandh) ಮಾಡಲು ಮುಂದಾಗಿವೆ.
ಕರ್ನಾಟಕದಲ್ಲಿ ಎಂಇಎಸ್ ನಿಷೇಧ, ಮೇಕೆದಾಟು, ಕಳಸ ಬಂಡೂರಿ ಯೋಜನೆಗೆ ಶೀಘ್ರ ಅನುಮತಿ ಸೇರಿದಂತೆ ನಾಡು-ನುಡಿ, ನೆಲ-ಜಲ ವಿಷಯವಾಗಿ ಕನ್ನಡ ಒಕ್ಕೂಟಗಳು ಶನಿವಾರ ಕರ್ನಾಟಕ ಬಂದ್ ಹಮ್ಮಿಕೊಂಡಿವೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್ ಕೈಗೊಂಡಿವೆ. ಬೆಳಗ್ಗೆ 10:30ಕ್ಕೆ ಬೆಂಗಳೂರಿನ (Bengaluru) ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಇದನ್ನೂ ಓದಿ: ಮಾರ್ಚ್ 22ರ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ: ಡಿಕೆಶಿ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ. ನಮ್ಮ ಯೂನಿಯನ್‌ನವರು ಬೆಂಬಲ ಕೊಟ್ರೆ ಬಸ್ ಓಡಲ್ಲ ಅಂದಿದ್ದಾರೆ. ಆದರೆ, ಸರ್ಕಾರದ ನಡೆಯನ್ನು ಕನ್ನಡ ಹೋರಾಟಗಾರರು ಉಗ್ರವಾಗಿ ಖಂಡಿಸಿದ್ದಾರೆ. 20 ದಿನಗಳಿಂದ ಬಂದ್‌ಗೆ ಕರೆ ಕೊಟ್ಟಿದ್ದೇವೆ. ಆದರೂ, ಬಂದ್ ಬೇಡ ಅಂತಿರೋದು ಸರಿನಾ..? ಅಂತ ಕಿಡಿಕಾರಿದ್ದಾರೆ.
ಅಖಂಡ ಕರ್ನಾಟಕ ಬಂದ್‌ಗೆ ಬೆಂಗಳೂರಿನ ಪ್ರಮುಖ ಮಾಲ್‌ಗಳಾದ ಒರಾಯನ್ ಮಾಲ್, ಮಂತ್ರಿ ಮಾಲ್, ಯಶವಂತಪುರದ ಮೆಟ್ರೋ ಹೋಲ್ ಸೇಲ್ ಮಾರ್ಕೆಟ್, ರಾಜಾಜಿನಗರದ ರಾಮೇಶ್ವರ ಕೆಫೆಯ ಜೊತೆ ಕನ್ನಡ ಒಕ್ಕೂಟ ಮಾತುಕತೆ ನಡೆಸಿದ್ದು, ಬಂದ್‌ಗೆ ಬೆಂಬಲ ಯಾಚಿಸಿವೆ. ಇದನ್ನೂ ಓದಿ: ರಾಷ್ಟ್ರಗೀತೆ ಗಾಯನದ ವೇಳೆ ನಿತೀಶ್ ಕುಮಾರ್ ಮಾತುಕತೆ – ಬಿಹಾರ ಅಸೆಂಬ್ಲಿಯಲ್ಲಿ ಗದ್ದಲ, ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಒತ್ತಾಯ
ಏನಿರುತ್ತೆ?
* ಆಸ್ಪತ್ರೆ, ಮೆಡಿಕಲ್, ಹಾಲು, ಅಗತ್ಯವಸ್ತುಗಳು
* ಮೆಟ್ರೋ, ಪೆಟ್ರೋಲ್ ಬಂಕ್, ಹೋಟೆಲ್,
* ಎಪಿಎಂಸಿ
* ಪೀಣ್ಯ ಕೈಗಾರಿಕಾ ಪ್ರದೇಶ ಓಪನ್ (13 ಸಾವಿರ ಕೈಗಾರಿಕೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ..)
ಏನಿರಲ್ಲ?
ಓಲಾ, ಉಬರ್ ಟ್ಯಾಕ್ಸಿ & ಆಟೋ
50:50 ಬೆಂಬಲ:
ಮಧ್ಯಾಹ್ನದ ಬಳಿಕ ಥಿಯೇಟರ್, ಮಾಲ್, ಬೇಕರಿ, ಬಾರ್ ಅಂಡ್ ರೆಸ್ಟೋರೆಂಟ್, ಅಂಗಡಿ ಮುಂಗಟ್ಟು, ಬೀದಿ ಬದಿ ವ್ಯಾಪಾರ
17 ಜಿಲ್ಲೆಗಳಲ್ಲಿ ಬಂದ್‌ಗೆ ಬೆಂಬಲ ನಿರಾಕರಣೆ:
ಇನ್ನೂ ಎಂಇಎಸ್ ಪುಂಡಾಟ ಖಂಡಿಸಿ ಕರೆ ನೀಡಿರುವ ಬಂದ್‌ಗೆ 17 ಜಿಲ್ಲೆಗಳು ಬೆಂಬಲ ನೀಡಿಲ್ಲ. 11 ಜಿಲ್ಲೆಗಳಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. 2 ಜಿಲ್ಲೆಗಳು ಮಾತ್ರ ಸಂಪೂರ್ಣ ಬೆಂಬಲ ನೀಡಿವೆ. ಕರ್ನಾಟಕ ಬಂದ್‌ಗೆ ಬೆಳಗಾವಿ, ಮಂಡ್ಯದಲ್ಲಿ
ಮಾತ್ರ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಉಳಿದಂತೆ ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಉಡುಪಿ, ಯಾದಗಿರಿ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಳ್ಳಾರಿ, ಬೀದರ್, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕೋಡಿ, ಕಲಬುರಗಿ, ಹಾಸನ, ಹಾವೇರಿ, ಹುಬ್ಬಳ್ಳಿ, ಕಾರವಾರ, ಮಡಿಕೇರಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ ಹಾಗೂ ಯಾದಗಿರಿ ಜಿಲ್ಲೆಗಳು ಬಂದ್‌ಗೆ ಬೆಂಬಲ ನಿರಾಕರಿಸಿವೆ.